ಬೆಂಗಳೂರು: ಜೂನ್ 13 ಮತ್ತು 14 ರಂದು ಎರಡು ದಿನಗಳ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಸಮಯದಲ್ಲಿ ಅವರು, ರಾಷ್ಟ್ರೀಯ ಸೈನಿಕ ಶಾಲೆಯ ಅಮೃತ ಮಹೋತ್ಸವ ಹಾಗೂ ಕನಕಪುರ ರಸ್ತೆ ಸಮೀಪದ ದೊಡ್ಡ ಕಲ್ಲಸಂದ್ರ ವೈಕುಂಠ ಬೆಟ್ಟದಲ್ಲಿ ತಿರುಪತಿ-ತಿರುಮಲ ದೇವಾಲಯ ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮೂಲಗಳ ಪ್ರಕಾರ, ಜೂನ್ 13 ರಂದು ಸೋಮವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಷ್ಟ್ರಪತಿಯವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಂಗಳವಾರ ಜೂನ್ 14ರಂದು ಬೆಂಗಳೂರು ಹೊರವಲಯದ ಕನಕಪುರ ರಸ್ತೆ ಸಮೀಪದ ದೊಡ್ಡ ಕಲ್ಲಸಂದ್ರ ಬಳಿಯ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಎರಡೂ ದಿನ ರಾಷ್ಟ್ರಪತಿಯವರು ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದು, ಜೂನ್ 14 ರಂದು ಇಸ್ಕಾನ್ ಕಾರ್ಯಕ್ರಮದ ಬಳಿಕ ದೆಹಲಿಗೆ ತೆರಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.