ಬೆಂಗಳೂರು: ಪರಿಷ್ಕೃತ ಪಠ್ಯ ಪುಸ್ತಕವನ್ನು ಜನರ ಮುಂದೆ ಇಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹೇಳಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಏನು ಬಿಟ್ಟಿದ್ದರು, ಈಗ ನಾವೇನು ಸೇರಿಸಿದ್ದೇವೆ ಎಲ್ಲಾ ಅಂಶವನ್ನು ಸಾರ್ವಜನಿಕರ ಮುಂದೆ ಇಡುತ್ತೇವೆ. ಜನರು ತಪ್ಪಿದೆ ಎಂದು ಹೇಳಿದರೆ ಅದನ್ನು ಬದಲಾಯಿಸುವ ಮನಸ್ಸಿದೆ ಎಂದು ಈಗಾಗಲೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ತಪ್ಪಿದೆ ಎಂದು ಹೇಳಿದ್ದನ್ನು ನಾವು ಸರಿಪಡಿಸಿದ್ದೇವೆ ಎಂದಿದ್ದಾರೆ.
ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ ವೆಬ್ ಸೈಟ್ನಲ್ಲಿ ಪಠ್ಯ ಪರಿಷ್ಕೃತ ಹಾಗೂ ಹಳೆಯ ಪಠ್ಯದ ವಿವರ ಹಾಕುತ್ತೇವೆ. ಪರಿಷ್ಕರಣೆ ಆಗಿರುವ ಪಠ್ಯಗಳಲ್ಲಿ ಲೋಪ ಇದ್ದರೆ ಸರಿಪಡಿಸುತ್ತೇವೆ ಎಂದಿದ್ದಾರೆ.
ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಹಲವು ಪಠ್ಯ ತೆಗೆದಿದ್ದಾರೆ. ಸಿದ್ದರಾಮಯ್ಯ ಇದರ ಬಗ್ಗೆ ಉತ್ತರ ಕೊಡಬೇಕಿತ್ತು. ಅದರ ವಿಚಾರಕ್ಕೆ ಸಿದ್ದರಾಮಯ್ಯ ಹೋಗಲೇ ಇಲ್ಲ. ನಾಡು ನುಡಿ ಮೇಲೆ ಅಭಿಮಾನ ಹುಟ್ಟುವ ಪಾಠಗಳನ್ನೇ ಬರಗೂರು ತೆಗೆದಿದ್ದರು ಎಂದು ಸಚಿವರು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.