ನವದೆಹಲಿ: ದೇಶದ ನಾಗರಿಕರು ಆರೋಗ್ಯವಂತರಾಗಿದ್ದರೆ ಮಾತ್ರ ಅಭಿವೃದ್ಧಿ ಹೊಂದಿದ ಭಾರತದ ಕನಸು ನನಸಾಗಲು ಸಾಧ್ಯ ಎಂದು ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ವಿಶ್ವ ಆಹಾರ ಸುರಕ್ಷತಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯವಂತ ನಾಗರಿಕರು ಆರೋಗ್ಯವಂತ ಸಮಾಜವನ್ನು ನಿರ್ಮಿಸುತ್ತಾರೆ. ಎಲ್ಲರಿಗೂ ಕೈಗೆಟಕುವ ಮತ್ತು ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ನರೇಂದ್ರ ಮೋದಿ ಸರ್ಕಾರವು ದೇಶದಾದ್ಯಂತ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.
ವಿಶ್ವ ಆಹಾರ ಸುರಕ್ಷತಾ ದಿನದ ಸಂದರ್ಭದಲ್ಲಿ ಡಾ ಮಾಂಡವೀಯ ಅವರು ‘ಆಯುರ್ವೇದ ಆಹಾರ್’ ಲೋಗೋವನ್ನು ಬಿಡುಗಡೆ ಮಾಡಿದರು.
ಈ ಲಾಂಛನ ಆಯುರ್ವೇದ ಆಹಾರಗಳನ್ನು ಸುಲಭವಾಗಿ ಗುರುತಿಸಲು ಮತ್ತು ಆರೋಗ್ಯವನ್ನು ಸುಧಾರಿಸುವಲ್ಲಿ ಅದರ ಸಾಬೀತಾದ ಪ್ರಯೋಜನಗಳನ್ನು ತಿಳಿಯಲು ‘ಆಯುರ್ವೇದ ಆಹಾರ್’ ಲಾಂಛನ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ, ಆರೋಗ್ಯ ರಕ್ಷಣೆಯು ದೇಶದಲ್ಲಿ ಸಮಗ್ರ ಅಭಿವೃದ್ಧಿಯನ್ನು ಕಂಡಿದೆ ಎಂದ ಮಾಂಡವಿಯಾ, ಆಹಾರ ಸುರಕ್ಷತೆ ಮತ್ತು ಆರೋಗ್ಯಕರ ಆಹಾರ ಪದ್ಧತಿಗಳನ್ನು ಖಾತ್ರಿಪಡಿಸುವಲ್ಲಿ ರಾಜ್ಯಗಳು ಪ್ರಮುಖ ಪಾತ್ರವನ್ನು ಹೊಂದಿವೆ. ಆರೋಗ್ಯಪೂರ್ಣ ರಾಷ್ಟ್ರ ನಿರ್ಮಾಣಕ್ಕೆ ಎಲ್ಲ ನಾಗರಿಕರು ಒಗ್ಗೂಡುವುದು ಇಂದಿನ ಅಗತ್ಯವಾಗಿದೆ ಎಂದರು.
ಆಹಾರ ಸುರಕ್ಷತೆಯ ಐದು ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ಅಳೆಯಲು ಸಚಿವರು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ FSSAIನ 4 ನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕ (SFSI) ಅನ್ನು ಬಿಡುಗಡೆ ಮಾಡಿದರು. ದೇಶದಲ್ಲಿ ಆಹಾರ ಸುರಕ್ಷತೆ ಪರಿಸರ ವ್ಯವಸ್ಥೆಯಲ್ಲಿ ಸ್ಪರ್ಧಾತ್ಮಕ ಮತ್ತು ಧನಾತ್ಮಕ ಬದಲಾವಣೆಯನ್ನು ಸೃಷ್ಟಿಸುವ ಉದ್ದೇಶದಿಂದ 2018-19 ರಿಂದ SFSI ಅನ್ನು ಪ್ರಾರಂಭಿಸಲಾಗಿದೆ. ಈ ಸೂಚ್ಯಂಕವು ನಾಗರಿಕರಿಗೆ ಸುರಕ್ಷಿತ ಮತ್ತು ಪೌಷ್ಟಿಕ ಆಹಾರವನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.