ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಹೆಚ್ಚಳ ಮಾಡಿದೆ. ಏರುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಂಡಿದೆ.
ಇಂದು ಹಣಕಾಸು ನೀತಿ ಬಿಡುಗಡೆ ಮಾಡಿದ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು, ರೆಪೋ ದರವನ್ನು ಶೇ 0.50ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
ಹೀಗಾಗಿ ಪರಿಷ್ಕೃತ ರೆಪೋ ದರ ಈಗ ಶೇ4.90 ಆಗಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಹಣದುಬ್ಬರ ಪ್ರಮಾಣ ಶೇ.6ರ ಮೇಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಆರ್ಬಿಐ ಮೇ 4ರಂದು ರೆಪೋ ದರವನ್ನು ಶೇ.0.40ರಷ್ಟು ಹೆಚ್ಚಳ ಮಾಡಿತ್ತು.
ರೆಪೋ ದರವನ್ನು ಹೆಚ್ಚಳ ಮಾಡಿರುವುದರಿಂದ ಗೃಹ ಮತ್ತಿತರ ಸಾಲಗಳ ಮೇಲೆ ಪರಿಣಾಮ ಬೀರಲಿದೆ. ಬ್ಯಾಂಕ್ ಬಡ್ಡಿ ದರಗಳು ಹೆಚ್ಚಾಗುವ ಸಾಧ್ಯತೆ ಇದೆ.
Statement by Shri Shaktikanta Das, RBI Governor https://t.co/U3sHH9bKAw
— ReserveBankOfIndia (@RBI) June 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.