ನವದೆಹಲಿ: ಭಾರತದ ದಿಗ್ಗಜ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಅವರು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
ಮಹಿಳಾ ODIಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಯೊಂದಿಗೆ ಮಿಥಾಲಿ ನಿವೃತ್ತಿಯಾಗಿದ್ದಾರೆ. ಅವರು 232 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, 50.68 ಸರಾಸರಿಯಲ್ಲಿ 7805 ರನ್ ಗಳಿಸಿದ್ದಾರೆ.
ಮಿಥಾಲಿ ಜೂನ್ 1999 ರಲ್ಲಿ ಐರ್ಲೆಂಡ್ ವಿರುದ್ಧದ ODI ನಲ್ಲಿ ಚೊಚ್ಚಲವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾಎದಪಣೆ ಮಾಡಿದರು. ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು.
ಆಕೆಯ ನಾಯಕತ್ವದಲ್ಲಿ ಭಾರತವು 2017 ರ ಐಸಿಸಿ ಮಹಿಳಾ ವಿಶ್ವಕಪ್ನ ಫೈನಲ್ಗೆ ತಲುಪಿತು. 2005 ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್ನ ಫೈನಲ್ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಾಗ ಮಿಥಾಲಿ ತಂಡದ ನಾಯಕಿಯೂ ಆಗಿದ್ದರು.
“ವರ್ಷಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್ಗಾಗಿ ಎದುರು ನೋಡುತ್ತಿದ್ದೇನೆ” ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.
Thank you for all your love & support over the years!
I look forward to my 2nd innings with your blessing and support. pic.twitter.com/OkPUICcU4u— Mithali Raj (@M_Raj03) June 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.