ಬೆಂಗಳೂರು: ಲೋಕಾಯುಕ್ತ ನೇಮಕಾತಿಗೆ ಎಲ್ಲಾ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದ್ದು, ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಸೂಚನೆಯನ್ನು ಪಾಲಿಸಿ ಕ್ರಮ ವಹಿಸಲಾಗಿದೆ ಎಂದರು.
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರಿಗೂ ಪ್ರಸ್ತಾವನೆ ಇಲ್ಲ ಎಂದು ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ತನ್ನ ಬಲದಿಂದಲೇ ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇರುವ ಪ್ರಸ್ತಾವನೆಗೂ ನಮಗೂ ಸಂಬಂಧವಿಲ್ಲ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.