ಮೈಸೂರು: ಬೆಂಗಳೂರಿನ ಹೊರಗಡೆ ಐದು ಶ್ರೇಣಿ-2 ನಗರಗಳನ್ನು ಅಭಿವೃದ್ಧಿಪಡಿಸಲು ಮತ್ತು ಮೈಸೂರಿನಲ್ಲಿ ಕೈಗಾರಿಕಾ ಟೌನ್ಶಿಪ್ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ.
‘ಬಿಯಾಂಡ್ ಬೆಂಗಳೂರು’ ಪ್ರಸ್ತಾವನೆಯ ಭಾಗವಾಗಿ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಕೈಗಾರಿಕೀಕರಣಕ್ಕೆ ಒತ್ತು ನೀಡಲು ಸರ್ಕಾರ ಬಯಸಿದೆ ಮತ್ತು ಬೃಹತ್ ಹೂಡಿಕೆಗಳನ್ನು ಆಕರ್ಷಿಸುವ ಕೈಗಾರಿಕೀಕರಣದಲ್ಲಿ ಮೈಸೂರು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ವಿಧಾನಪರಿಷತ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ದಾರ್ಶನಿಕ ಆಡಳಿತಗಾರರು ಹಾಕಿಕೊಟ್ಟ ಭದ್ರ ಬುನಾದಿ ಕರ್ನಾಟಕ ಪ್ರಗತಿಪರ ರಾಜ್ಯವಾಗಿ ಹೊರಹೊಮ್ಮಲು ಸಹಕಾರಿಯಾಗಿದೆ ಎಂದರು. ಇತ್ತೀಚೆಗೆ ಯೂರೋಪ್ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕರ್ನಾಟಕದ ಯಶಸ್ಸಿನ ಗುಟ್ಟನ್ನು ಹಂಚಿಕೊಂಡಿದ್ದನ್ನು ಸ್ಮರಿಸಿದರು.
ಮಾನವ ಸಂಪನ್ಮೂಲ ಸಾಮರ್ಥ್ಯವನ್ನು ಬಳಸಿಕೊಳ್ಳಲು ಸರ್ಕಾರ ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಿದೆ ಮತ್ತು ಈಗಾಗಲೇ 1.5 ಲಕ್ಷ ಜನರಿಗೆ ತರಬೇತಿ ನೀಡುತ್ತಿದೆ ಎಂದು ಸಿಎಂ ಹೇಳಿದರು.
“ಕೈಗಾರಿಕಾ ವಲಯ ಮತ್ತು ಉದ್ಯೋಗದ ಬೆಳವಣಿಗೆಗೆ ಕೊಡುಗೆ ನೀಡುವ ಕೃಷಿ ಕ್ಷೇತ್ರದತ್ತ ಗಮನಹರಿಸಲಾಗಿದೆ ಮತ್ತು ಹೊಸ ಶಿಕ್ಷಣ ನೀತಿಯು ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.