ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಜುಲೈ 18 ರಂದು ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಇಂದು ಪ್ರಕಟಿಸಿದ್ದಾರೆ.
ಪ್ರಸ್ತುತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಅದಕ್ಕೂ ಮೊದಲು ಅವರ ಉತ್ತರಾಧಿಕಾರಿ ಆಯ್ಕೆಯಾಗಿರಬೇಕು ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜೂನ್ 15 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ಜೂನ್ 29 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಅವರು ಹೇಳಿದ್ದಾರೆ.
ಇಲ್ಲಿಯವರೆಗೆ ಯಾವುದೇ ರಾಜಕೀಯ ಪಕ್ಷವು ಈ ಉನ್ನತ ಸಾಂವಿಧಾನಿಕ ಹುದ್ದೆಗೆ ತನ್ನ ಆಯ್ಕೆಯನ್ನು ಹೆಸರಿಸಿಲ್ಲ.
Voting for Presidential elections to be held on 18th July, counting of votes on 21st July: Chief Election Commissioner Rajiv Kumar pic.twitter.com/bTvawdiE9I
— ANI (@ANI) June 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.