ನವದೆಹಲಿ: ಈ ವರ್ಷ ಮೊದಲ ಬಾರಿಗೆ ಯಾತ್ರಾರ್ಥಿಗಳು ದಕ್ಷಿಣ ಕಾಶ್ಮೀರದ ವಾರ್ಷಿಕ ಹಿಂದೂ ತೀರ್ಥಯಾತ್ರೆ ಅಮರನಾಥಕ್ಕೆ ಶ್ರೀನಗರದಿಂದ ನೇರವಾಗಿ ಹೆಲಿಕಾಪ್ಟರ್ ಸೇವೆಯನ್ನು ಪಡೆಯಬಹುದು.
3,500 ಮೀಟರ್ ಎತ್ತರದಲ್ಲಿರುವ ಕೊನೆಯ ನಿಲ್ದಾಣವಾದ ಪಂಚತಾರ್ಣಿಗೆ ಶ್ರೀನಗರದಿಂದ ಹೆಲಿಕಾಪ್ಟರ್ ಸೇವೆಯನ್ನು ಪ್ರಾರಂಭಿಸಲು ಗೃಹ ವ್ಯವಹಾರಗಳ ಸಚಿವಾಲಯ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನಿರ್ದೇಶಿಸಿದೆ. ಇದರಿಂದ ಯಾತ್ರಾರ್ಥಿಗಳಿಗೆ ಸಾಕಷ್ಟು ಪ್ರಯೋಜನವಾಗಲಿದೆ. ಪಂಚತಾರ್ಣಿಯಿಂದ ಆರು ಕಿಲೋಮೀಟರ್ ಟ್ರೆಕಿಂಗ್ ಮಾಡಿದರೆ ಯಾತ್ರಿಕರು ಪವಿತ್ರ ಸ್ಥಳ ಅಮರನಾಥ ಗುಹೆಗೆ ತಲುಪಬಹುದು ಎಂದು ಉನ್ನತ ಅಧಿಕೃತ ಮೂಲಗಳು ತಿಳಿಸಿವೆ.
ಅಮರನಾಥ ಯಾತ್ರೆಯ ಮಾರ್ಗದಲ್ಲಿ ಹೆಚ್ಚಿನ ಪ್ರವಾಸಿಗರ ದಟ್ಟಣೆಯನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದವರೆಗೆ ಬಾಲ್ಟಾಲ್ ಮತ್ತು ಪಹಲ್ಗಾಮ್ನಿಂದ ಯಾತ್ರಾರ್ಥಿಗಳಿಗೆ ಹೆಲಿಕಾಪ್ಟರ್ ಸೌಲಭ್ಯ ಲಭ್ಯವಿತ್ತು. ಆದರೆ ಪಂಚತಾರ್ಣಿಯನ್ನು ತಲುಪಲು ಯಾತ್ರಾರ್ಥಿಗಳು ನಡೆದುಕೊಂಡು ಹೋಗಬೇಕಿತ್ತು ಅಥವಾ ಕುದುರೆಗಳ ಸಹಾಯವನ್ನು ಪಡೆಯಬೇಕಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.