ನವದೆಹಲಿ: ಕರಾಚಿಯಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವ ಕುರಿತು ಭಾರತ ಶುಕ್ರವಾರ ಪಾಕಿಸ್ಥಾನ ಸರ್ಕಾರಕ್ಕೆ ತನ್ನ ಪ್ರತಿಭಟನೆಯನ್ನು ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಹಿಂದೂ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಹಕ್ಕುಗಳನ್ನು ರಕ್ಷಿಸುವಂತೆ ಭಾರತವು ಪಾಕಿಸ್ಥಾನವನ್ನ ಕೇಳಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ ಹಿಂದೂ ದೇವಾಲಯದ ಮೇಲೆ ಕೆಲವು ಉಗ್ರರು ದಾಳಿ ನಡೆಸಿದ್ದಾರೆ. ದೇಶದ ಬಂದರು ನಗರದ ಕೊರಂಗಿ ನಂಬರ್ 5 ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಹಿಂದೂ ಅರ್ಚಕರ ನಿವಾಸವಿರುವ ಶ್ರೀ ಮಾರಿ ಮಾತಾ ಮಂದಿರದ ಮೇಲೂ ದಾಳಿ ನಡೆಸಲಾಗಿದ್ದು, ಹಿಂದೂ ಸಮುದಾಯದಲ್ಲಿ ಭಯ ಹುಟ್ಟಿಸಿದೆ.
ಹಿಂಸಾತ್ಮಕ ಗುಂಪೊಂದು ಅರ್ಚಕರ ಮನೆಯ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ಪ್ರತಿಷ್ಠಾಪಿಸಲು ಕೆಲವು ದಿನಗಳ ಹಿಂದೆ ಅರ್ಚಕರು ವಿಗ್ರಹಗಳನ್ನು ತಂದಿದ್ದರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.