ಬೆಂಗಳೂರು: ಇಂದು ರಾಜ್ಯಸಭೆ ಚುನಾವಣೆ ನಡೆಯುತ್ತಿದೆ. ಕರ್ನಾಟಕದ 4 ಸ್ಥಾನಗಳು ಸೇರಿದಂತೆ 15 ರಾಜ್ಯಗಳ ಒಟ್ಟು 57 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಫಲಿತಾಂಶ ಕೂಡ ಇಂದೇ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ಆರು ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ. ಮೂವರು ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ನಾಲ್ಕನೇ ಸೀಟು ಪೈಪೋಟಿಯಿಂದ ಕೂಡಿರಲಿದೆ. ಆದರೆ, ಮೂರು ಪಕ್ಷಗಳಿಗೆ ಸಿಂಧು – ಅಸಿಂಧು ಮತಗಳ ಆತಂಕ ಎದರಾಗಿದೆ.
ಈ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವ ಅರ್ಹತೆ ಪಡೆಯಲಿದ್ದಾರೆ.
ರಾಜ್ಯಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚುನಾವಣೆ ಕಾರಣ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.