ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನಲ್ಲಿ ಸುಮಾರು 3,050 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಹೊರಡಿಸಿದ ಹೇಳಿಕೆಯ ಪ್ರಕಾರ, ಈ ಯೋಜನೆಗಳು ಈ ಪ್ರದೇಶದಲ್ಲಿ ನೀರಿನ ಪೂರೈಕೆಯನ್ನು ಸುಧಾರಿಸಲು ಸಹಾಯ ಮಾಡುತ್ತವೆ, ಜೊತೆಗೆ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ಜೀವನ ಸೌಕರ್ಯವನ್ನು ಹೆಚ್ಚಿಸುತ್ತವೆ ಎಂದಿದ್ದಾರೆ.
ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಎರಡು ದಶಕಗಳಲ್ಲಿ ರಾಜ್ಯವು ಅಭೂತಪೂರ್ವ ಅಭಿವೃದ್ಧಿಯನ್ನು ತೋರಿಸಿದೆ ಎಂದು ಬಣ್ಣಿಸಿದರು. “ಕಳೆದ ಎರಡು ದಶಕಗಳಲ್ಲಿ ರಾಜ್ಯದಲ್ಲಿ ಆಗಿರುವ ಕ್ಷಿಪ್ರ ಅಭಿವೃದ್ಧಿಯು ಗುಜರಾತ್ನ ಹೆಮ್ಮೆಯಾಗಿದೆ. ಕಳೆದ 8 ವರ್ಷಗಳಲ್ಲಿ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರವನ್ನು ಅನುಸರಿಸಿ, ನಮ್ಮ ಸರ್ಕಾರವು ರಾಜ್ಯದ ಜನರ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಿದೆ” ಎಂದರು.
ಆಗಮನದ ವೇಳೆ ಪ್ರಧಾನಿ ಮೋದಿ ಅವರಿಗೆ ಗುಜರಾತ್ ಚಿಖ್ಲಿಯಲ್ಲಿ ಆದಿವಾಸಿಗಳಿಂದ ಸಾಂಪ್ರದಾಯಿಕ ಸ್ವಾಗತ ದೊರೆಯಿತು.
#WATCH | Prime Minister Narendra Modi gets a traditional welcome by tribals in Gujarat's Chikhli. pic.twitter.com/Q1e9RJ6e4O
— ANI (@ANI) June 10, 2022
Gujarat | PM Narendra Modi inaugurates and lays the foundation stone for multiple developments projects in Navsari pic.twitter.com/3spg4FqI61
— ANI (@ANI) June 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.