ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದ ಅಹಮದಾಬಾದ್ನಲ್ಲಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದ (IN-SPAce) ಪ್ರಧಾನ ಕಚೇರಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.
ಇದು ಜೂನ್ 2020 ರಲ್ಲಿ ಕೇಂದ್ರ ಸಚಿವ ಸಂಪುಟದಿಂದ ಅನುಮೋದಿಸಲ್ಪಟ್ಟ ಯೋಜನೆಯಾಗಿದೆ.
ಉದ್ಘಾಟನೆಯ ನಂತರ ಮೋದಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದ (IN-SPACe) ಪ್ರಧಾನ ಕಛೇರಿಯನ್ನು ವೀಕ್ಷಿಸಿದರು ಮತ್ತು ಪರಿಶೀಲಿಸಿದರು.
IN-SPAce ನೋಡಲ್ ಏಜೆನ್ಸಿಯಾಗಿರುತ್ತದೆ, ಇದು ಬಾಹ್ಯಾಕಾಶ ಚಟುವಟಿಕೆಗಳು ಮತ್ತು ಸರ್ಕಾರೇತರ ಖಾಸಗಿ ಸಂಸ್ಥೆಗಳು ಬಾಹ್ಯಾಕಾಶ ಇಲಾಖೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಬಳಸಲು ಅನುಮತಿಸುತ್ತದೆ. ಬಾಹ್ಯಾಕಾಶ ಕ್ಷೇತ್ರಕ್ಕೆ ಗರಿಷ್ಠ ಖಾಸಗಿ ಭಾಗವಹಿಸುವಿಕೆಯನ್ನು ಖಚಿತಪಡಿಸುವುದು ಇದರ ಗುರಿಯಾಗಿದೆ.
ಇದಕ್ಕೂ ಮುನ್ನ ಪ್ರಧಾನಿಯವರು ನವಸಾರಿಯಲ್ಲಿ ಎಎಂ ನಾಯಕ್ ಹೆಲ್ತ್ಕೇರ್ ಕಾಂಪ್ಲೆಕ್ಸ್ ಮತ್ತು ನಿರಾಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ಗೆ ಆಗಮಿಸಿದ್ದು, ನವಸಾರಿಯಲ್ಲಿ ‘ಗುಜರಾತ್ ಗೌರವ ಅಭಿಯಾನ’ದ ಸಂದರ್ಭದಲ್ಲಿ ಬಹು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.