ನವದೆಹಲಿ: ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ದೇಶದ ಪ್ರಮುಖ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇದರಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿದೆ.
ಯೋಗ ದಿನದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯೋಗ ದಿನದಂದು ಯೋಗ ಆಚರಿಸುವಂತೆ ಮತ್ತು ಯೋಗವನ್ನು ಜೀವನದ ಅವಿಭಾಜ್ಯ ಭಾಗವಾಗಿ ಮಾಡುವಂತೆ ಜನರಿಗೆ ಕರೆ ನೀಡಿದ್ದಾರೆ.
“ಕಳೆದ ಕೆಲವು ವರ್ಷಗಳಲ್ಲಿ, ಯೋಗವು ಜಾಗತಿಕವಾಗಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ನಾಯಕರು, CEO ಗಳು, ಕ್ರೀಡಾಪಟುಗಳು ಮತ್ತು ನಟರು ಸೇರಿದಂತೆ ಜೀವನದ ವಿವಿಧ ಹಂತಗಳ ಜನರು ನಿಯಮಿತವಾಗಿ ಯೋಗವನ್ನು ಅಭ್ಯಾಸ ಮಾಡುತ್ತಾರೆ ಮತ್ತು ಅದು ಅವರಿಗೆ ಹೇಗೆ ಸಹಾಯ ಮಾಡಿದೆ ಎಂಬುದರ ಕುರಿತು ಮಾತನಾಡುತ್ತಾರೆ” ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ವಿಶ್ವವು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲದೆ. ಯೋಗದಿಂದ ಒಂದಲ್ಲ ಹಲವಾರು ಪ್ರಯೋಜನಗಳಿವೆ ಎಂದರು. ಯೋಗವು ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
8ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.