ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಬೆಮಿನಾ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಪೊಲೀಸರು ಕ್ಷಿಪ್ರ ಎನ್ಕೌಂಟರ್ ನಡೆಸಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಇಬ್ಬರು ಭಯೋತ್ಪಾದಕರನ್ನು ಸಂಹರಿಸಿದ್ದಾರೆ.
ಇಬ್ಬರು ಉಗ್ರರು ಅಮರನಾಥ ಯಾತ್ರೆ ಯನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.
ಉಗ್ರರಿಂದ ವಶಪಡಿಸಿಕೊಂಡ ದಾಖಲೆಗಳ ಪ್ರಕಾರ, ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಪಾಕಿಸ್ತಾನದ ಫೈಸಲಾಬಾದ್ನ ನಿವಾಸಿ ಅಬ್ದುಲ್ಲಾ ಗೌಜ್ರಿ ಎಂದು ಗುರುತಿಸಲಾಗಿದೆ. ಈ ಬಗ್ಗೆ ಕಾಶ್ಮೀರ ವಲಯ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಸರಣಿ ಟ್ವೀಟ್ಗಳಲ್ಲಿ ಉಲ್ಲೇಖಿಸಿದ್ದಾರೆ.
ಇನ್ನೊಬ್ಬನನ್ನು ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನ ಆದಿಲ್ ಹುಸೇನ್ ಮೀರ್ ಅಲಿಯಾಸ್ ಸುಫಿಯಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ದಾಖಲೆಗಳ ಪ್ರಕಾರ, ಇವರು 2018 ರಲ್ಲಿ ವಾಘಾದಿಂದ ವೀಸಾ ಭೇಟಿಯ ಮೇಲೆ ಪಾಕಿಸ್ತಾನಕ್ಕೆ ತೆರಳಿದ್ದರು. ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಐಜಿಪಿ ಕಾಶ್ಮೀರ ಈ ಕಾರ್ಯಾಚರಣೆಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ದೊಡ್ಡ ಯಶಸ್ಸು ಎಂದು ಬಣ್ಣಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.