ಮೈಸೂರು: ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಜೂನ್ 21ರಂದು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇಂದ್ರದ ಯೋಜನೆಗಳ ಫಲಾನುಭವಗಳೊಂದಿಗೂ ಸಂವಾದ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಸಹಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಈ ಸಂವಾದ ಕಾರ್ಯಕ್ರಮವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಇಲ್ಲ ವೇದಿಕೆ ನಿರ್ಮಾಣ, ಗಣ್ಯರು, ಫಲಾನುಭವಿಗಳಿಗೆ ಆಸನದ ವ್ಯವಸ್ಥೆ, ಭದ್ರತೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವ ಎಸ್.ಟ ಸೋಮಶೇಖರ್ ಚರ್ಚೆ ನಡೆಸಿದರು. ನಾಲ್ಕು ಜಿಲ್ಲೆಗಳ ಫಲಾನುಭವಿಗಳನ್ನು ಒಂದೆಡೆ ಸೇರಿಸುವ ಕಾರ್ಯಕ್ರಮ ಇದಾಗಿದ್ದು ಎಲ್ಲೂ ಲೋಪವಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ಅರಮನೆ ಆವರಣದಲ್ಲಿ ಯೋಗ ಕಾರ್ಯಕ್ರಮಕ್ಕೆ 15 ಸಾವಿರ ಜನ ಭಾಗಿ ಆಗುವ ನಿರೀಕ್ಷೆ ಇದೆ. ಆನ್ ಲೈನ್ ನಲ್ಲಿ ನೋಂದಣಿ ಮಾಡಬಹುದು. ಕೇಂದ್ರದ ನಿರ್ದೇಶನದ ಅನುಸಾರ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.