ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಬ್ಬಂದಿಗಳು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಶೋಪಿಯಾನ್ನ ಕಂಜಿಯುಲಾರ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯಿತು.
ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಜಾನ್ ಮೊಹಮ್ಮದ್ ಲೋನ್ ಹತನಾದ ಭಯೋತ್ಪಾದಕರಲ್ಲಿ ಒಬ್ಬ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
ಭದ್ರತಾ ಪಡೆಗಳು ಎನ್ಕೌಂಟರ್ ಸೈಟ್ನಿಂದ 1 ಎಕೆ 47 ರೈಫಲ್ ಮತ್ತು ಪಿಸ್ತೂಲ್ ಸೇರಿದಂತೆ ಹಲವು ಅಕ್ರಮ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆ ಸ್ಥಳದಲ್ಲಿ 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
2022ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ 60ಕ್ಕೂ ಹೆಚ್ಚು ಕಾರ್ಯಾಚರಣೆಗಳಲ್ಲಿ 104 ಉಗ್ರರು ಹತರಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 30 ವಿದೇಶಿ ಭಯೋತ್ಪಾದಕರನ್ನು ಕೊಂದಿರುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ. ಈ ವರ್ಷ ಭದ್ರತಾ ಪಡೆಗಳು 16 ಸಿಬ್ಬಂದಿಯನ್ನು ಕಳೆದುಕೊಂಡಿದ್ದರೆ, ವಿವಿಧ ಘಟನೆಗಳಲ್ಲಿ 17 ನಾಗರಿಕರು ಸಹ ಸಾವನ್ನಪ್ಪಿದ್ದಾರೆ.
ಮಂಗಳವಾರವೂ ಶ್ರೀನಗರದಲ್ಲಿ ಎಲ್ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ಥಾನಿ ಹ್ಯಾಂಡ್ಲರ್ಗಳು ಕಳುಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.