ನವದೆಹಲಿ: ಪಾಕಿಸ್ಥಾನವು ಭಾರತದೊಳಗೆ ದುಷ್ಕೃತ್ಯಗಳನ್ನು ನಡೆಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ, ಆದರೆ ನಮ್ಮ ಸಶಸ್ತ್ರ ಪಡೆಗಳು ಅದರ ನೀಚ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಮೊದಲ ದಿನ ಬಾರಾಮುಲ್ಲಾ ಕಂಟೋನ್ಮೆಂಟ್ನಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಪಾಕಿಸ್ಥಾನವು ಭಾರತವನ್ನು ಘಾಸಿಗೊಳಿಸುವ ನೀತಿಯನ್ನು ಹೊಂದಿದೆ, ಆದರೆ ನಮ್ಮ ಸಶಸ್ತ್ರ ಪಡೆಗಳು ರಕ್ಷಣಾತ್ಮಕ ಗುರಾಣಿಯಂತೆ ಭಾರತವನ್ನು ಕಾಪಾಡುತ್ತಿವೆ. ಭಯೋತ್ಪಾದನೆ ನಿರ್ಮೂಲನೆಗೆ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.
ಭಾರತವು ‘ವಸುಧೈವ ಕುಟುಂಬಕಂ’ನಲ್ಲಿ ನಂಬಿಕೆ ಹೊಂದಿದೆ ಎಂದು ಪ್ರಸ್ತಾಪಿಸಿದ ಸಚಿವರು, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಅಥವಾ ಅತಿಕ್ರಮಿಸಿಲ್ಲ ಎಂದು ಹೇಳಿದರು. ನಮ್ಮ ರಾಷ್ಟ್ರದ ರಕ್ಷಣೆಗಾಗಿ ನಮ್ಮ ಭದ್ರತಾ ಪಡೆಗಳ ಸೇವೆ ಮತ್ತು ತ್ಯಾಗಕ್ಕೆ ರಾಷ್ಟ್ರವು ಋಣಿಯಾಗಿದೆ ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಎರಡು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕಾಗಿ ರಾಜನಾಥ್ ಸಿಂಗ್ ಶ್ರೀನಗರಕ್ಕೆ ಆಗಮಿಸಿದ್ದರು. ಒಟ್ಟಾರೆ ಭದ್ರತಾ ಪರಿಸ್ಥಿತಿಯನ್ನು ನಿರ್ಣಯಿಸಲು ಅವರು ಜಮ್ಮು ಮತ್ತು ಕಾಶ್ಮೀರದ ಮುಂಚೂಣಿ ಪ್ರದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ.
ಸೇನೆಯ ಹಿರಿಯ ಕಮಾಂಡರ್ಗಳು ಒಳನಾಡಿನಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆಯಲ್ಲಿನ ಒಟ್ಟಾರೆ ಭದ್ರತಾ ಪರಿಸ್ಥಿತಿಯ ಬಗ್ಗೆ ಅವರಿಗೆ ಮಾಹಿತಿ ನೀಡಲಿದ್ದಾರೆ. ಮಹಾರಾಜ ಗುಲಾಬ್ ಸಿಂಗ್ ಅವರ ‘ರಾಜ್ಯಾಭಿಷೇಕ ಸಮಾರಂಭ’ದ 200 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಅವರು ನಾಳೆ ಜಮ್ಮುವಿಗೆ ಭೇಟಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.