ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ದಕ್ಷಿಣ ಕಾಶ್ಮೀರದಲ್ಲಿ ನಿನ್ನೆ ನಡೆದ ಅವಳಿ ಎನ್ಕೌಂಟರ್ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.
ಕುಲ್ಗಾಮ್ ಜಿಲ್ಲೆಯ ಕುಜಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ, ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದ ಹಂಗಲ್ಗುಂಡ್ ಗ್ರಾಮದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಉಗ್ರರನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಜುನೈದ್ ಮತ್ತು ಬಸಿತ್ ಭಟ್ ಎಂದು ಗುರುತಿಸಲಾಗಿದೆ.
ಭಯೋತ್ಪಾದಕ ಬಸಿತ್ ಕಳೆದ ವರ್ಷ ಅನಂತನಾಗ್ನಲ್ಲಿ ಬಿಜೆಪಿಯ ಸರಪಂಚ್ ಗುಲಾಂ ರಸೂಲ್ ದಾರ್ ಮತ್ತು ಅವರ ಪತ್ನಿ, ಪಂಚ್ ಹತ್ಯೆಯಲ್ಲಿ ಭಾಗಿಯಾಗಿದ್ದನು.
ಈ ನಡುವೆ, ಪುಲ್ವಾಮಾ ಜಿಲ್ಲೆಯ ಲಿಟ್ಟರ್ ಪ್ರದೇಶದ ಅರ್ಮುಲ್ಲಾ ಗ್ರಾಮದಲ್ಲಿ ಹಾಕಲಾಗಿದ್ದ 15 ಕೆಜಿ ತೂಕದ ಐಇಡಿಯನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಈ ಅಪರಾಧಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಈ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.