ನವದೆಹಲಿ: ಹೆಣ್ಣುಮಕ್ಕಳು ರಾಜಕೀಯದಲ್ಲಿ ಭಾಗವಹಿಸುವುದನ್ನು ಉತ್ತೇಜಿಸಲು ದೇಶದಲ್ಲೇ ಮೊದಲ ಬಾರಿಗೆ ‘ಬಾಲಿಕಾ ಪಂಚಾಯತ್’ ಅನ್ನು ಗುಜರಾತಿನಲ್ಲಿ ಪರಿಚಯಿಸಲಾಗಿದೆ
ಗುಜರಾತಿನ ಕಚ್ ಜಿಲ್ಲೆಯ ಹಲವಾರು ಹಳ್ಳಿಗಳಲ್ಲಿ ಪ್ರಾರಂಭವಾದ ದೇಶದ ಮೊದಲ ಹೆಣ್ಙು ಮಕ್ಕಳ ಪಂಚಾಯತ್ “ಬಾಲಿಕಾ ಪಂಚಾಯತ್” ಹೆಣ್ಣುಮಕ್ಕಳ ಸಾಮಾಜಿಕ ಮತ್ತು ರಾಜಕೀಯ ಬೆಳವಣಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
ಇದು ‘ಬೇಟಿ ಬಚಾವೋ ಬೇಟಿ ಪಢಾವೋ’ ಅಭಿಯಾನದ ಅಡಿಯಲ್ಲಿ ಗುಜರಾತ್ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ವಿಶಿಷ್ಟ ಉಪಕ್ರಮವಾಗಿದೆ. ಇದು ಕಚ್ ಜಿಲ್ಲೆಯ ಕುನಾರಿಯಾ, ಮಸ್ಕಾ, ಮೊಟಗುವಾ ಮತ್ತು ವಡ್ಸರ್ ಗ್ರಾಮಗಳಲ್ಲಿ ಪ್ರಾರಂಭವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ದೇಶಾದ್ಯಂತ ಬಾಲಿಕ ಪಂಚಾಯತ್ ಅನ್ನು ಪ್ರಾರಂಭಿಸಲು ಯೋಜಿಸುತ್ತಿದೆ.
“ಬಾಲಿಕಾ ಪಂಚಾಯತ್” ಅನ್ನು 11-21 ವಯೋಮಾನದವರು ನಿರ್ವಹಿಸುತ್ತಾರೆ ಮತ್ತು ಹೆಣ್ಣು ಮಗುವಿನ ಸಾಮಾಜಿಕ ಮತ್ತು ರಾಜಕೀಯ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಸಮಾಜದಿಂದ ಬಾಲ್ಯ ವಿವಾಹ ಮತ್ತು ವರದಕ್ಷಿಣೆ ಪದ್ಧತಿಯಂತಹ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕುವುದು ಇದರ ಮುಖ್ಯ ಉದ್ದೇಶವಾಗಿದೆ.
ಕಛ್ನ ಬಾಲಿಕಾ ಪಂಚಾಯತ್ ಸದಸ್ಯೆ ಗರ್ಬಾ ಭಾರತಿ ಮಾತನಾಡಿ, “ಬಾಲಿಕಾ ಪಂಚಾಯತ್ 10 ರಿಂದ 21 ವರ್ಷದೊಳಗಿನ ಹೆಣ್ಣುಮಕ್ಕಳ ಪಂಚಾಯತ್ ಆಗಿದೆ, ಇದರ ಮುಖ್ಯ ಉದ್ದೇಶವೆಂದರೆ ಪಂಚಾಯಿತಿಯ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಹುಡುಗಿಯರು ಕೊಡುಗೆ ನೀಡುವುದು ಮತ್ತು ಬಾಲ್ಯದಿಂದಲೂ ರಾಜಕೀಯದಲ್ಲಿ ಸಕ್ರಿಯರಾಗುವಂತೆ ಮಾಡುವುದು” ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.