ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಮಂಡಳಿ ಇಂದು ಘೋಷಣೆ ಮಾಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ನಾಳೆ ಸುದ್ದಿಗೋಷ್ಠಿಯನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಏಪ್ರಿಲ್ 23 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದರು. 3,46,936 ಬಾಲಕರು ಮತ್ತು 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದರು. ರಾಜ್ಯದ 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nuc.in, pue.kar.nic.in ಅಥವಾ karresults.nic.inನಲ್ಲಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
— B.C Nagesh (@BCNagesh_bjp) June 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.