ಬೆಂಗಳೂರು: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.
ಯೋಜನೆಯ ಮೂಲಕ ಯುವಕರು ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿದ್ದಾರೆ. ದೇಶದ ಯುವಜನರ ಪರವಾಗಿ ಪ್ರಧಾನಮಂತ್ರಿಗಳಿಗೆ ಟ್ವೀಟ್ ಮೂಲಕ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.