
ವಿಶ್ವಸಂಸ್ಥೆ: ಪಾಕಿಸ್ಥಾನ ಮೂಲದ ಉಗ್ರಗಾಮಿ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡುವ ಭಾರತ ಮತ್ತು ಅಮೆರಿಕದ ಜಂಟಿ ಪ್ರಸ್ತಾವನೆಯನ್ನು ಚೀನಾ ಕೊನೆಯ ಕ್ಷಣದಲ್ಲಿ ವಿಶ್ವಸಂಸ್ಥೆಯಲ್ಲಿ ತಡೆಹಿಡಿದಿದೆ.
ಮಕ್ಕಿ ಯುಎಸ್-ನಿಯೋಜಿತ ಭಯೋತ್ಪಾದಕ ಮತ್ತು ಲಷ್ಕರ್-ಎ-ತೈಬಾ (ಎಲ್ಇಟಿ) ಮುಖ್ಯಸ್ಥ ಮತ್ತು 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸೋದರ ಸಂಬಂಧಿ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಐಎಸ್ಐಎಲ್ ಮತ್ತು ಅಲ್ ಖೈದಾ ನಿರ್ಬಂಧಗಳ ಸಮಿತಿಯ ಅಡಿಯಲ್ಲಿ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಹೆಸರಿಸಲು ಭಾರತ ಮತ್ತು ಅಮೆರಿಕ ಜಂಟಿ ಪ್ರಸ್ತಾವನೆಯನ್ನು ಸಲ್ಲಿಸಿದ್ದವು ಎಂದು ತಿಳಿದುಬಂದಿದೆ. ಆದರೆ ಚೀನಾ ಪ್ರಸ್ತಾಪವನ್ನುಕೊನೆಯ ಕ್ಷಣದಲ್ಲಿ ತಡೆಹಿಡಿದಿದೆ.
ಇದಕ್ಕೂ ಮೊದಲು, ಪಾಕಿಸ್ಥಾನದ ಪರಮ ಮಿತ್ರ ಚೀನಾ ಈ ರೀತಿಯ ಕೃತ್ಯಗಳನ್ನು ಎಸಗಿದೆ.ಮೇ 2019 ರಲ್ಲಿ, ವಿಶ್ವ ಸಂಸ್ಥೆಯು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ನನ್ನು ‘ಕಪ್ಪು ಪಟ್ಟಗೆ ಸೇರಿಸುವ ಪ್ರಯತ್ನವನ್ನು ತಡೆಹಿಡಿದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


