ಬೆಂಗಳೂರು: ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2022 ಅನ್ನು ವಿಭಿನ್ನವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಹಲವು ಯೋಜನೆಗಳನ್ನು ಹಾಕಿಕೊಂಡಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಲ್ಲಿ ಕರ್ನಾಟಕ ಪಾರಂಪರಿಕ ತಾಣಗಳೂ ಸೇರಿದೆ ಎಂದು ಇಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ಹಂಪಿ, ಹಳೆಬೀಡು, ಪಟ್ಟದ ಕಲ್ಲು, ವಿಜಯಪುರದ ಐತಿಹಾಸಿಕ ಸ್ಥಳಗಳು ಯೋಗ ದಿನಾಚರಣೆಗೆ ಸಾಕ್ಷಿಯಾಗಲಿವೆ ಎಂದಿದ್ದಾರೆ.
ಇನ್ನು ಅರಮನೆ ನಗರಿ ಮೈಸೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನಡೆಯಲಿದ್ದು, ಅಪಾರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2022ರ ವೈಶಿಷ್ಟ್ಯಗಳು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅರಮನೆ ನಗರಿ ಮೈಸೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ಶ್ರೀ @narendramodi ಚಾಲನೆ ನೀಡಲಿದ್ದಾರೆ.
1/2 pic.twitter.com/hgp8iuQBDa— CM of Karnataka (@CMofKarnataka) June 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.