ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದನ್ನು ವರದಿ ಮಾಡಲು ತೆರಳಿದ್ದ ಸಂವಾದ ಪತ್ರಕರ್ತನ ಮೇಲೆ ಕೆಲವು ಕಿಡಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ರಾಜ್ಯಾದ್ಯಂತ ಖಂಡನೆಗಳು ವ್ಯಕ್ತವಾಗಿದೆ.
ಹಲ್ಲೆಗೊಳಗಾದ ಪತ್ರಕರ್ತನನ್ನು ಬೈರಪ್ಪ ಹರೀಶ್ ನಿಜರೂಪ ಗುರುತಿಸಲಾಗಿದೆ. ಕಾರ್ಯಕ್ರಮವನ್ನು ವರದಿ ಮಾಡುತ್ತಿದ್ದ ವೇಳೆ ಕೆಲವು ಗೂಂಡಾಗಳು ಅವರನ್ನು ನಿಂದಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗೃಹಸಚಿವ ಅರಗ ಜ್ಞಾನೇಂದ್ರ ಅವರು, “ಫ್ರೀಡಂ ಪಾರ್ಕ್ ಬಳಿ ನಡೆದ ಕಾರ್ಯಕ್ರಮವನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ಖಂಡನೀಯ. ಪ್ರಜಾಪ್ರಭುತ್ವ ಹಾಗೂ ಪತ್ರಿಕಾ ಸ್ವಾತಂತ್ರ್ಯ ವಿರೋಧಿ ಮನಸ್ಥಿತಿಯ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಜರುಗಿಸುತ್ತೇವೆ” ಎಂದಿದ್ದಾರೆ.
ಈ ಘಟನೆಯನ್ನು ವಿರೋಧಿಸಿ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಹಲ್ಲೆ ಮಾಡಿದವರ ವಿರುದ್ಧವಾಗಿ ಶೀಘ್ರವಾಗಿ ಕಾನೂನು ಕ್ರಮಕ್ಕಾಗಿ ಒತ್ತಾಯ ಕೇಳಿಬರುತ್ತಿದೆ.
ಫ್ರೀಡಂ ಪಾರ್ಕ್ ಬಳಿ ನಡೆದ ಕಾರ್ಯಕ್ರಮವೊಂದನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ಖಂಡನೀಯ. ಪ್ರಜಾಪ್ರಭುತ್ವ ಹಾಗೂ ಪತ್ರಿಕಾ ಸ್ವಾತಂತ್ರ್ಯದ ವಿರೋಧಿ ಮನಸ್ಥಿತಿಯ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ.
— Araga Jnanendra (@JnanendraAraga) June 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.