ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕರ್ನಾಟಕಕ್ಕೆ ಎರಡು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. 27,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ ಭೇಟಿಯ ವೇಳೆ ಬೆಂಗಳೂರಿನಲ್ಲಿ ಭಾರತದ ಮೊದಲ ಹವಾನಿಯಂತ್ರಿತ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅವರು 150 ಟೆಕ್ನಾಲಜಿ ಹಬ್ಗಳನ್ನು ಪ್ರಾರಂಭಿಸಲಿದ್ದಾರೆ ಮತ್ತು ಮೈಸೂರಿನಲ್ಲಿ 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯವು ಹೊರಡಿಸಿದ ಹೇಳಿಕೆಯ ಪ್ರಕಾರ, ಪ್ರಧಾನಮಂತ್ರಿಯವರು ಬೆಂಗಳೂರು ಕ್ಯಾಂಟ್ನ ಪುನರಾಭಿವೃದ್ಧಿಗೆ ಶಿಲಾನ್ಯಾಸವನ್ನೂ ಮಾಡಲಿದ್ದಾರೆ.
ಸೋಮವಾರ ಮಧ್ಯಾಹ್ನ 12:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಮೆದುಳಿನ ಸಂಶೋಧನಾ ಕೇಂದ್ರವನ್ನು (ಸಿಬಿಆರ್) ಉದ್ಘಾಟಿಸಲಿದ್ದಾರೆ ಮತ್ತು ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.
ಇಂದು ಮಧ್ಯಾಹ್ನ 1:45 ರ ಸುಮಾರಿಗೆ ಅವರು ಬೆಂಗಳೂರಿನ ಡಾ ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಡಾ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಅವರು ಕರ್ನಾಟಕದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಪರಿವರ್ತಿಸುವ ಸಲುವಾಗ ಅಭಿವೃದ್ಧಿಪಡಿಸಿದ ರಾಷ್ಟ್ರ 150 `ತಂತ್ರಜ್ಞಾನ ಕೇಂದ್ರʼಗಳನ್ನು ಸಮರ್ಪಿಸಲಿದ್ದಾರೆ.
ಮಧ್ಯಾಹ್ನ 2:45 ರ ಸುಮಾರಿಗೆ, ಪ್ರಧಾನಿ ಮೋದಿ ಅವರು ಬೆಂಗಳೂರಿನ ಕೊಮ್ಮಘಟ್ಟವನ್ನು ತಲುಪಲಿದ್ದಾರೆ, ಅಲ್ಲಿ ಅವರು 27000 ಕೋಟಿ ರೂಪಾಯಿಗಳ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಸಂಜೆ 5:30 ರ ಸುಮಾರಿಗೆ, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಪ್ರಧಾನ ಮಂತ್ರಿ ಅವರು ನಾಗನಹಳ್ಳಿ ರೈಲು ನಿಲ್ದಾಣದಲ್ಲಿ 480 ರೂ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕೋಚಿಂಗ್ ಟರ್ಮಿನಲ್ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸಂಜೆ 7 ಗಂಟೆ ಸುಮಾರಿಗೆ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದು, ಸಂಜೆ 7:45ರ ಸುಮಾರಿಗೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
832 ಹಾಸಿಗೆಗಳ ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಆಸ್ಪತ್ರೆಯನ್ನು IISc ಬೆಂಗಳೂರಿನ ಕ್ಯಾಂಪಸ್ನಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಮತ್ತು ಪ್ರತಿಷ್ಠಿತ ಸಂಸ್ಥೆಯಲ್ಲಿ ವಿಜ್ಞಾನ, ಎಂಜಿನಿಯರಿಂಗ್ ಮತ್ತು ವೈದ್ಯಕೀಯವನ್ನು ಸಂಯೋಜಿಸಲು ಸಹಾಯ ಮಾಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.