ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದೆ. ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿವೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ.
ಇಂದು ಬೆಳಗ್ಗೆ ಯಶವಂತ್ ಸಿನ್ಹಾ ಟ್ವಿಟ್ ಮಾಡಿ, ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ.
ಮೂಲಗಳ ಪ್ರಕಾರ ಸಿನ್ಹಾ ಅವರನ್ನು ರಾಷ್ಟ್ರಪತಿ ಹುದ್ದೆಯ ಒಮ್ಮತದ ಅಭ್ಯರ್ಥಿಯನ್ನಾಗಿಸಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹಮತ ಸೂಚಿಸಿದ್ದಾರೆ. ಇದಕ್ಕೆ ಇತರ ಪಕ್ಷಗಳು ಒಪ್ಪಿಕೊಂಡಿವೆ
ರಾಷ್ಟ್ರಪತಿ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಪ್ರತಿಪಕ್ಷಗಳ 17 ನಾಯಕರು ಇಂದು ಎನ್ಸಿಪಿ ನಾಯಕ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.