ಲಂಡನ್: ಇಂದು ವಿಶ್ವದಾದ್ಯಂತ 8ನೇ ಯೋಗ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ.
ಬ್ರಿಟನ್, ನೇಪಾಳ, ಚೀನಾ, ಆಸ್ಟ್ರೇಲಿಯಾ, ಪಾಕಿಸ್ತಾನ ಸೇರಿದಂತೆ ಜಗತ್ತಿನ ನಾನಾ ದೇಶಗಳಲ್ಲಿ ಜನರು ಅತ್ಯಂತ ಉತ್ಸಾಹದಿಂದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಲಂಡನ್ ನಲ್ಲಿ ಭಾರತದ ಹೈಕಮಿಷನ್ ಮೂಲಕ ಕಳೆದೊಂದು ವಾರದಿಂದ ಯೋಗ ಸಂಬಂಧಿತ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಸ್ವಾಮಿನಾರಾಯಣ ಮಂದಿರದಲ್ಲಿ ಎಂಟನೇ ಯೋಗ ದಿನವನ್ನು ಅತ್ಯಂತ ಅದ್ದೂರಿಯಿಂದ ಆಚರಿಸಲಾಗಿದೆ.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲೂ ಜನರು ಉತ್ಸಾಹದಿಂದ ಯೋಗ ದಿನಾಚರಣೆ ಯಲ್ಲಿ ಪಾಲ್ಗೊಂಡಿದ್ದಾರೆ. ಚೀನಾ ರಾಜಧಾನಿ ಬೀಜಿಂಗ್ ಮತ್ತು ಆಸ್ಟ್ರೇಲಿಯಾ ರಾಜಧಾನಿ ಕ್ಯಾನ್ಬೆರಾ, ಪಾಕಿಸ್ತಾನದ ಇಸ್ಲಾಮಾಬಾದಿನಲ್ಲಿ ಕೂಡ ಯೋಗ ದಿನವನ್ನು ಆಚರಣೆ ಮಾಡಲಾಗಿದೆ.
ಕೊಲಂಬೋದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಗಣ್ಯರ ಜೊತೆಗೂಡಿ ಯೋಗ ಮಾಡಿದ್ದಾರೆ.
ವಿಶ್ವಸಂಸ್ಥೆಯ ಮುಖ್ಯ ಕಚೇರಿ ಕೂಡ ಯೋಗ ದಿನಾಚರಣೆಯ ಸಂಭ್ರಮದಲ್ಲಿತ್ತು. ಗಣ್ಯರು, ರಾಯಭಾರಿಗಳು, ಸಿಬ್ಬಂದಿಗಳು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು.
ನಮಸ್ತೆ ಎಂದು ಭಾಷಣ ಆರಂಭಿಸಿದ ವಿಶ್ವಸಂಸ್ಥೆಯ 76ನೇ ಅಧಿವೇಶನದ ಅಧ್ಯಕ್ಷ ಅಬ್ದುಲ್ ಶಹೀದ್ ಅವರು, ಯೋಗ ಎಂದರೆ ಏಕತೆ, ಬೌದ್ಧಿಕ ಸಾಮರ್ಥ್ಯ, ದೇಹ ಮತ್ತು ಆಧ್ಯಾತ್ಮಿಕತೆ ಸಂಪರ್ಕಿಸುವ ಮಾರ್ಗ ಎಂದು ಬಣ್ಣಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.