ನವದೆಹಲಿ: ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯನ್ನು ಜಾರಿಗೆ ತಂದ 36 ನೇ ರಾಜ್ಯವಾಗಿ ಅಸ್ಸಾಂ ಹೊರಹೊಮ್ಮಿದೆ.
ಅಸ್ಸಾಂ ಸೇರ್ಪಡೆಯೊಂದಿಗೆ, ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಎಲ್ಲಾ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ಆಹಾರ ಭದ್ರತೆಯನ್ನು ದೇಶಾದ್ಯಂತ ಪೋರ್ಟಬಲ್ ಮಾಡಲಾಗಿದೆ.
ಈ ಯೋಜನೆಯು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ತಮ್ಮ ಆಯ್ಕೆಯ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ತಮ್ಮ ಅರ್ಹ ಸಬ್ಸಿಡಿ ಆಹಾರ ಧಾನ್ಯಗಳನ್ನು ದೇಶದಲ್ಲಿ ಎಲ್ಲಿಯಾದರೂ ಪಡೆದುಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಫಲಾನುಭವಿಗಳಿಗೆ ವಿಶೇಷವಾಗಿ ವಲಸೆ ಫಲಾನುಭವಿಗಳಿಗೆ ಸಬ್ಸಿಡಿ ಆಹಾರ ಧಾನ್ಯಗಳನ್ನು ಖಾತ್ರಿಪಡಿಸುವಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಕಾರ್ಡ್ ಯೋಜನೆಯು ಗಣನೀಯವಾಗಿ ಕೊಡುಗೆ ನೀಡಿದೆ. ಅಲ್ಪಾವಧಿಯಲ್ಲಿಯೇ 80 ಕೋಟಿ ಫಲಾನುಭವಿಗಳನ್ನು ಇದು ಒಳಗೊಂಡಿದೆ.
ಆಗಸ್ಟ್ 2019 ರಲ್ಲಿ ಪ್ರಾರಂಭವಾದಾಗಿನಿಂದ, ಈ ಯೋಜನೆಯಡಿಯಲ್ಲಿ ಸುಮಾರು 71 ಕೋಟಿ ಪೋರ್ಟಬಲ್ ವಹಿವಾಟುಗಳು ನಡೆದಿವೆ, 40 ಸಾವಿರ ಕೋಟಿ ರೂಪಾಯಿಗಳಿಗೆ ಸಮನಾದ ಆಹಾರ ಧಾನ್ಯಗಳನ್ನು ಆಹಾರ ಸಬ್ಸಿಡಿಯಾಗಿ ತಲುಪಿಸಲಾಗಿದೆ.
ಈ ಯೋಜನೆಯನ್ನು ಹೆಚ್ಚು ತಡೆರಹಿತ ಮತ್ತು ವೇಗಗೊಳಿಸಲು MERA RATION ಮೊಬೈಲ್ ಅಪ್ಲಿಕೇಶನ್ ಅನ್ನು ಹೊರತರಲಾಗಿದೆ. ಈ ಮೊಬೈಲ್ ಅಪ್ಲಿಕೇಶನ್ ಫಲಾನುಭವಿಗಳಿಗೆ ಉಪಯುಕ್ತ ನೈಜ ಸಮಯದ ಮಾಹಿತಿಯನ್ನು ಒದಗಿಸುತ್ತಿದೆ ಮತ್ತು 13 ಭಾಷೆಗಳಲ್ಲಿ ಇದು ಲಭ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.