ನವದೆಹಲಿ: ಸ್ಕೈಟ್ರಾಕ್ಸ್ ತನ್ನ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ಸ್ 2022 ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೂರು ಭಾರತೀಯ ವಿಮಾನ ನಿಲ್ದಾಣಗಳು ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ವಿಶ್ವದ ಅತ್ಯುತ್ತಮ 100 ವಿಮಾನ ನಿಲ್ದಾಣಗಳಲ್ಲಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನ ಪಡೆದುಕೊಂಡಿದೆ.
ದೆಹಲಿ ವಿಮಾನ ನಿಲ್ದಾಣವು ಭಾರತದ ಅತ್ಯುತ್ತಮ ವಿಮಾನ ನಿಲ್ದಾಣವಾಗಿದ್ದು, 37 ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ವಿಮಾನ ನಿಲ್ದಾಣವು 61 ನೇ ಸ್ಥಾನದಲ್ಲಿದೆ, ಮುಂಬೈ ವಿಮಾನ ನಿಲ್ದಾಣವು 65 ನೇ ಸ್ಥಾನದಲ್ಲಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2022 ರ ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಪ್ರಶಸ್ತಿಗಳಲ್ಲಿ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜಾಗತಿಕವಾಗಿ ನಡೆಸಿದ ಸಮೀಕ್ಷೆಯಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ.
ಚೆಕ್-ಇನ್ನಿಂದ ಆಗಮನ, ವರ್ಗಾವಣೆ, ಶಾಪಿಂಗ್, ಭದ್ರತೆ, ವಲಸೆ ಮತ್ತು ನಿರ್ಗಮನದ ಗೇಟ್ಗಳಲ್ಲಿನ ವ್ಯವಸ್ಥೆಗಳವರೆಗಿನ ಗ್ರಾಹಕರ ಅನುಭವವನ್ನು ಸಮೀಕ್ಷೆಯು ಮೌಲ್ಯಮಾಪನ ಮಾಡುತ್ತದೆ.
ಈ ವರ್ಷದ ಆರಂಭದಲ್ಲಿ ನಡೆದ ವಿಂಗ್ಸ್ ಇಂಡಿಯಾ ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಅತ್ಯುತ್ತಮ ವಿಮಾನ ನಿಲ್ದಾಣ ಮತ್ತು ಏವಿಯೇಷನ್ ಇನ್ನೋವೇಶನ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.