ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 26 ರಿಂದ ಮೂರು ದಿನಗಳ ಜರ್ಮನಿ ಮತ್ತು ಯುಎಇ ಪ್ರವಾಸದಲ್ಲಿ ಇರಲಿದ್ದಾರೆ. ಈ ತಿಂಗಳ 26 ಮತ್ತು 27 ರಂದು G-7 ಶೃಂಗಸಭೆಗಾಗಿ ಮೋದಿ ಅವರು ಜರ್ಮನಿಯ Schloss Elmau ಗೆ ಭೇಟಿ ನೀಡಲಿದ್ದಾರೆ.
ಶೃಂಗಸಭೆಯ ಸಮಯದಲ್ಲಿ, ಅವರು ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವವನ್ನು ಒಳಗೊಂಡಿರುವ ಎರಡು ಅಧಿವೇಶನಗಳಲ್ಲಿ ಮಾತನಾಡುವ ನಿರೀಕ್ಷೆಯಿದೆ.
ಈ ಪ್ರಮುಖ ವಿಷಯಗಳಲ್ಲಿ ಅಂತರರಾಷ್ಟ್ರೀಯ ಸಹಯೋಗವನ್ನು ಬಲಪಡಿಸುವ ಪ್ರಯತ್ನದಲ್ಲಿ, ಅರ್ಜೆಂಟೀನಾ, ಇಂಡೋನೇಷಿಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾದಂತಹ ಇತರ ಪ್ರಜಾಪ್ರಭುತ್ವಗಳನ್ನು ಸಹ ಆಹ್ವಾನಿಸಲಾಗಿದೆ.
ಶೃಂಗಸಭೆಯ ವೇಳೆ ಮೋದಿ ಅವರು ಕೆಲವು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. G7 ಶೃಂಗಸಭೆಯ ಆಹ್ವಾನವು ಭಾರತ ಮತ್ತು ಜರ್ಮನಿ ನಡುವಿನ ಬಲವಾದ ಮತ್ತು ನಿಕಟ ಪಾಲುದಾರಿಕೆ ಮತ್ತು ಉನ್ನತ ಮಟ್ಟದ ರಾಜಕೀಯ ಬೆಸುಗೆಯ ಹಿನ್ನೆಲೆಯಿಂದ ಬಂದಿದೆ.
ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ, ಪ್ರಧಾನಿ ಮೋದಿ ಜೂನ್ 28 ರಂದು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಪ್ರಯಾಣಿಸಲಿದ್ದು, ಯುಎಇ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ವೈಯಕ್ತಿಕ ಸಂತಾಪ ಸೂಚಿಸಲಿದ್ದಾರೆ. ಯುಎಇಯ ಹೊಸ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರರಾಗಿ ಆಯ್ಕೆಯಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸಲಿದ್ದಾರೆ. ಅದೇ ರಾತ್ರಿ ಪ್ರಧಾನಿ ಯುಎಇಯಿಂದ ನಿರ್ಗಮಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.