ಮುಂಬಯಿ: ಮಹಾರಾಷ್ಟ್ರದ ಮಹಾಅಘಾಡಿ ಸರ್ಕಾರ ಪತನವಾಗುವ ಸನಿಹದಲ್ಲಿದೆ. ಶಿವಸೇನೇಯ 4oಕ್ಕೂ ಅಧಿಕ ಶಾಸಕರು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಫೇಸ್ಬುಕ್ ಲೈವ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ರಾಜೀನಾಮೆ ನೀಡಲು ಸಿದ್ಧರಿರುವುದಾಗಿ ಹೇಳಿಕೊಂಡಿದ್ದಾರೆ.
“ನಾನು ಈಗಲೇ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಲು ಸಿದ್ಧನಿದ್ದೇನೆ. ಸ್ಥಾನಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಮುಂದಿನ ಮುಖ್ಯಮಂತ್ರಿ ಶಿವಸೇನೆಯವರೇ ಆಗಿರುತ್ತಾರೆ ಎಂದು ನೀವು ನನಗೆ ಭರವಸೆ ನೀಡಬಹುದೇ” ಎಂದು ಉದ್ಧವ್ ಠಾಕ್ರೆ ಶಿವಸೇನೆ ಬಂಡಾಯ ಶಾಸಕರಿಗೆ ಸಂದೇಶವನ್ನು ನೀಡಿದ್ದಾರೆ.
“ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನನ್ನ ಎದುರಿಗೆ ಬಂದು ಹೇಳಿ, ಇದನ್ನು ನಾನು ಖಂಡಿತ ಪುರಸ್ಕರಿಸುತ್ತೇನೆ. ಮುಖ್ಯಮಂತ್ರಿ ಸ್ಥಾನವು ನನಗೆ ಆಕಸ್ಮಿಕವಾಗಿ ಬಂದಿದ್ದು, ಅದು ನನ್ನ ಹಂಬಲವಲ್ಲ” ಎಂದು ಠಾಕ್ರೆ ಹೇಳಿದ್ದಾರೆ.
ಅಷ್ಟೇ ಅಲ್ಲದೇ ಹಿಂದುತ್ವವನ್ನು ನೆನಪು ಮಾಡಿಕೊಂಡಿದ್ದಾರೆ. ಹಿಂದುತ್ವವನ್ನು ಶಿವಸೇನೆಯನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.