ನವದೆಹಲಿ: ಭಾರತವು ಈ ವರ್ಷ ಶೇಕಡಾ 7.5 ರಷ್ಟು ಆರ್ಥಿಕ ಬೆಳವಣಿಗೆ ದರವನ್ನು ತಲುಪುವ ನಿರೀಕ್ಷೆ ಇದೆ ಎಂದು ಬ್ರಿಕ್ಸ್ ಬಿಸಿನೆಸ್ ಫೋರಮ್ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ಈ ವರ್ಷ ಭಾರತದ ಆರ್ಥಿಕತೆಯು ಶೇಕಡಾ 7.5 ರಷ್ಟು ಬೆಳವಣಿಗೆಯಾಗಲಿದೆ ಎಂದು ಸರ್ಕಾರ ನಿರೀಕ್ಷಿಸುತ್ತಿದೆ” ಎಂದಿದ್ದಾರೆ.
ನಿನ್ನೆ ಸಂಜೆ ಬ್ರಿಕ್ಸ್ ಬಿಸಿನೆಸ್ ಫೋರಮ್ ಸಭೆಯಲ್ಲಿ ವರ್ಚುವಲ್ ಭಾಷಣ ಮಾಡಿದ ನರೇಂದ್ರ ಮೋದಿ, ಭಾರತದ ಆರ್ಥಿಕತೆಯ ಬಲವನ್ನು ಎತ್ತಿ ತೋರಿಸಿದರು. 2025 ರ ವೇಳೆಗೆ ಭಾರತೀಯ ಡಿಜಿಟಲ್ ಆರ್ಥಿಕತೆಯ ಮೌಲ್ಯವು ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ ಎಂದು ಹೇಳಿದರು.
ದೇಶದ ರಾಷ್ಟ್ರೀಯ ಮೂಲಸೌಕರ್ಯ ಅಭಿವೃದ್ಧಿ ಅಡಿಯಲ್ಲಿ 1.5 ಟ್ರಿಲಿಯನ್ ಡಾಲರ್ ಹೂಡಿಕೆ ಮಾಡಲು ಅವಕಾಶವಿದೆ ಎಂದು ಅವರು ಹೇಳಿದರು.
ಭಾರತದ ಯಶಸ್ಸು ಕೋವಿಡ್-19 ಸಮಯದಲ್ಲಿಯೂ ಸಹ ನಾವೀನ್ಯತೆ ಮತ್ತು ಸ್ಟಾರ್ಟ್ಅಪ್ಗಳೊಂದಿಗೆ ತಂತ್ರಜ್ಞಾನದ ಬೆಳವಣಿಗೆಯನ್ನು ಆಧರಿಸಿದೆ ಎಂದು ಪ್ರಧಾನಿ ಹೇಳಿದರು.
ಪ್ರಧಾನಿ ಗತಿಶಕ್ತಿಯೊಂದಿಗೆ ಮೂಲಸೌಕರ್ಯ ನಿರ್ಮಾಣ ಮತ್ತು ಡಿಜಿಟಲ್ ರೂಪಾಂತರ ಮತ್ತು ಡಿಜಿಟಲ್ ಆರ್ಥಿಕತೆಯ ಮೂಲಕ ಸರ್ಕಾರವು ಸುಲಲಿತ ಜೀವನಕ್ಕೆ ಒತ್ತು ನೀಡಿದೆ ಎಂದು ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.