ನವದೆಹಲಿ: ಪರಮೇಶ್ವರನ್ ಅಯ್ಯರ್ ಅವರನ್ನು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಅಯ್ಯರ್ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ಪ್ರಸ್ತುತ ಸಿಇಒ ಅಮಿತಾಭ್ ಕಾಂತ್ ಅವರ ಅಧಿಕಾರಾವಧಿಯು ಜೂನ್ 30, 2022 ರಂದು ಪೂರ್ಣಗೊಂಡ ನಂತರ ಅಯ್ಯರ್ ಅವರ ಅಧಿಕಾರಾವಧಿಯು ಪ್ರಾರಂಭವಾಗುತ್ತದೆ.
“ಸಚಿವ ಸಂಪುಟದ ನೇಮಕಾತಿ ಸಮಿತಿಯು ಪರಮೇಶ್ವರನ್ ಅಯ್ಯರ್ ಅವರನ್ನು ಜೂನ್ 30ರಿಂದ ಒಂದು ಅವಧಿಗೆ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ” ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.
ಫೆಬ್ರುವರಿ 17, 2016 ರಂದು, ಎರಡು ವರ್ಷಗಳ ಅವಧಿಗೆ ಕಾಂತ್ ಅವರು ನ್ಯಾಷನಲ್ ಇನ್ಸ್ಟಿಟ್ಯೂಷನ್ ಫಾರ್ ಟ್ರಾನ್ಸ್ಫಾರ್ಮಿಂಗ್ ಇಂಡಿಯಾ (ನೀತಿ ಆಯೋಗ್) ಸಿಇಒ ಆಗಿ ನೇಮಕಗೊಂಡರು. ನಂತರ ಅವರ ಅವಧಿಯನ್ನು ವಿಸ್ತರಣೆ ಮಾಡಲಾಯಿತು. ಜೂನ್ 30ರಂದು ಅವರು ನಿವೃತ್ತರಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.