ರನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದ್ದಾರೆ.
“ನಾವು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ. ನಾವು ಈ ನಿರ್ಧಾರವನ್ನು ಬಿಜೆಪಿ ಅಥವಾ ಎನ್ಡಿಎ ಬೆಂಬಲಕ್ಕಾಗಿ ಅಥವಾ ವಿರೋಧ ಪಕ್ಷದ ವಿರುದ್ಧ ತೆಗೆದುಕೊಂಡಿಲ್ಲ. ನಾವು ನಮ್ಮ ಪಕ್ಷ ಮತ್ತು ಚಳವಳಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಬಿಎಸ್ಪಿ ಹೇಳಿದೆ.
ಈ ನಡುವೆ, ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಜುಲೈ 18 ರ ಚುನಾವಣೆಗೆ ಬೆಂಬಲ ಕೋರಿದರು. ಸಿನ್ಹಾ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಕರೆ ಮಾಡಿ ಬೆಂಬಲ ಕೋರಿದ್ದಾರೆ.
We've decided to support NDA's Presidential election candidate Droupadi Murmu. We've taken this decision neither in support of BJP or NDA nor against opposition but keeping our party and movement in mind: BSP chief Mayawati pic.twitter.com/7QXbnVNXNj
— ANI UP/Uttarakhand (@ANINewsUP) June 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.