ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.
ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು ಪತ್ರ ನೀಡಿದರು.
ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಡಾ. ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.
ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಗೆ ತ್ವರಿತಗತಿಯಲ್ಲಿ ಬಿ.ಡಿ.ಎ ನಿವೇಶನ ಮಂಜೂರು ಮಾಡಿಸಿ, ಕರಾರು ಪತ್ರವನ್ನು ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರಿದರು. ಮುಖ್ಯಮಂತ್ರಿಗಳಿಗೆ ಇದೇ ಸಂದರ್ಭದಲ್ಲಿ ಅವರು ಧನ್ಯವಾದಗಳನ್ನು ಅರ್ಪಿಸಿದರು. pic.twitter.com/xMCGDUzxgV
— CM of Karnataka (@CMofKarnataka) June 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.