ನವದೆಹಲಿ: ಪಕ್ಷದಲ್ಲಿ ಉನ್ನತ ಪಾತ್ರವನ್ನು ವಹಿಸಲು ರಾಹುಲ್ ಗಾಂಧಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಮಾತ್ರ ಪಕ್ಷದ ಜವಾಬ್ದಾರಿಯನ್ನು ಅವರಿಗೆ ನೀಡಲು ಹಿಂದೇಟು ಹಾಕುತ್ತಿದೆ.
ಪ್ರಸ್ತುತ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿಯವರೇ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲಿ ಎಂಬ ಆಶಯ ಹಲವಾರು ನಾಯಕರದ್ದು. ರಾಹುಲ್ ಅವರ ಮೇಲೆ ಇವರಿಗೆ ಹೆಚ್ಚಿನ ವಿಶ್ವಾಸ ಇಲ್ಲ.
ಬಿಹಾರದಲ್ಲಿ ಚುನಾವಣೆ ಎದುರಾಗುತ್ತಿದೆ, ಈ ವೇಳೆ ರಾಹುಲ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುವುದು ಉತ್ತಮ ಬೆಳವಣಿಗೆಯಲ್ಲ ಎಂದು ಹಲವಾರು ಕಾಂಗ್ರೆಸ್ಸಿಗರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.
ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಸೋತ ಬಳಿಕ ರಾಹುಲ್ ಅವರ ಇಮೇಜ್ ಹಾಳಾಗಿದ್ದು, ಕಾಂಗ್ರೆಸ್ನ ಉನ್ನತ ನಾಯಕರು ಅವರಿಗೆ ಪಕ್ಷದ ಜವಾಬ್ದಾರಿಯನ್ನು ಹಸ್ತಾಂತರಿಸಲು ಹಿಂದೇಟು ಹಾಕುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.