ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಣೆ ಮಾಡಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲು 2017ರಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. 12 ಲಕ್ಷ ರೂಪಾಯಿ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು. ಆದರೆ ಪ್ರತಿಮೆ ಮಾತ್ರ ನಿರ್ಮಾಣ ಆಗಿರಲಿಲ್ಲ ಎಂದರು.
ಕೆಂಪೇಗೌಡರ ಮುಂದಿನ ವರ್ಷದ ಜಯಂತಿಯ ಸಂದರ್ಭದಲ್ಲಿ ಪ್ರತಿಮೆ ಸ್ಥಾಪನೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ ೫೧೩ ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
1/3 pic.twitter.com/g3PfoJyrAN— CM of Karnataka (@CMofKarnataka) June 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.