ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನೌಪೋರಾ-ಖಾರ್ಪೋರಾ ಟ್ರುಬ್ಜಿ ಪ್ರದೇಶದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಂದು ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಇಂದು ಮುಂಜಾನೆ ಎನ್ಕೌಂಟರ್ ಆರಂಭವಾಗಿದ್ದು, ಇಲ್ಲಿಯವರೆಗೆ ಇಬ್ಬರು ಉಗ್ರರ ಶವಗಳನ್ನು ಎನ್ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ”ಇಬ್ಬರು ಭಯೋತ್ಪಾದಕರ ಹತ್ಯೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಟ್ರುಬ್ಜಿ ಪ್ರದೇಶದ ನೌಪೋರಾ-ಖೇರ್ಪೋರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರ ಗುರುತು ಪತ್ತೆ ಇನ್ನು ಆಗಬೇಕಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅಡಗಿ ಕುಳಿತಿರುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆಗಳಿಗೆ ಮಾಹಿತಿ ಇದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ಪಿಎಫ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಸಿಕ್ಕಿದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಪರಿಣಾಮವಾಗಿ ಗನ್ ಕದನ ಆರಂಭವಾಯಿತು ಎಂದು ಭದ್ರತಾ ಪಡೆಗಳು ತಿಳಿಸಿವೆ.
ಈ ವರ್ಷ ಕಾಶ್ಮೀರ ಕಣಿವೆಯಲ್ಲಿ 70 ಕ್ಕೂ ಹೆಚ್ಚು ಎನ್ಕೌಂಟರ್ಗಳು ನಡೆದಿದ್ದು, ಇದರ ಪರಿಣಾಮವಾಗಿ 120 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹತರಾದ 120 ಭಯೋತ್ಪಾದಕರ ಪೈಕಿ 33 ಮಂದಿ ವಿದೇಶಿಗರು ಹೆಚ್ಚಾಗಿ ಪಾಕಿಸ್ತಾನಿಗಳು, 16 ಭದ್ರತಾ ಸಿಬ್ಬಂದಿ ಮತ್ತು 19 ನಾಗರಿಕರು ವಿವಿಧ ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು 46 ಸಕ್ರಿಯ ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.