ಪುತ್ತೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಚಾರ್ಯರಾದ ಶೇಷಗಿರಿ ಎಂ ಭಾರತ ದೇಶವು ವಿವಿಧ ಜಾತಿ,ಧರ್ಮ, ಮತ ಮತ್ತು ಭಾಷೆಯನ್ನು ಒಳಗೊಂಡಿದ್ದು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ.
ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲಾ ಭೇಧಭಾವಗಳನ್ನು ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸಿಕೊಳ್ಳಬೇಕು. ಇಂದಿನ ಯುವಜನತೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯವನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪುಷ್ಪರಾಜ್ ಕೆ ಏಕತಾ ಪ್ರತಿಜ್ಞಾ ವಿಧಿ ನೆರವೇರಿಸಿದರು. ವಿದ್ಯಾರ್ಥಿನಿಯರಾದ ಕು.ಸುಶ್ಮಿತ ಮತ್ತು ಶೃತಿ ಏಕತಾ ಗೀತೆಯನ್ನು ಹಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ವೆಂಕಟ್ರಮಣ ನಾಕ್ ಎನ್ ಇವರು ವಂದಿಸಿದರು.
ಭಾರತ ಸರಕಾರ ಮತ್ತು ಕರ್ನಾಟಕ ಸರಕಾರಗಳ ನಿರ್ದೇಶನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗ ಭಾಗವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.