ನವದೆಹಲಿ: ನಕಲಿ ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಸೋಮವಾರ ಪಾಕಿಸ್ತಾನ ರಾಯಭಾರ ಕಚೇರಿಗಳ ಹಲವಾರು ಅಧಿಕೃತ ಖಾತೆಗಳನ್ನು ನಿಷೇಧಿಸಿದೆ. ವಿಶ್ವಸಂಸ್ಥೆ, ಟರ್ಕಿ, ಇರಾನ್ ಮತ್ತು ಈಜಿಪ್ಟ್ನಲ್ಲಿರುವ ಪಾಕಿಸ್ತಾನಿ ರಾಯಭಾರಿ ಕಚೇರಿಯ ಅಧಿಕೃತ ಟ್ವಿಟರ್ ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ.
ಪಾಕಿಸ್ತಾನʼ ರಾಷ್ಟ್ರೀಯ ಸಾರ್ವಜನಿಕ ಪ್ರಸಾರಕ ʼರೇಡಿಯೋ ಪಾಕಿಸ್ತಾನʼದ ಖಾತೆಯನ್ನು ಸಹ ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ತಡೆಹಿಡಿಯಲಾಗಿದೆ.
“ಕಾನೂನು ಪ್ರತಿಕ್ರಿಯೆಯಾಗಿ ಭಾರತದಲ್ಲಿ ಖಾತೆಯನ್ನು ತಡೆಹಿಡಿಯಲಾಗಿದೆ. ಈ ಖಾತೆಗಳು ಭಾರತದ ವಿರುದ್ಧ ದ್ವೇಷ ಹರಡುವ ದೋಷ ಸಂದೇಶವನ್ನು ಪ್ರದರ್ಶಿಸುತ್ತಿವೆ” ಎಂದು ಮೂಲಗಳು ತಿಳಿಸಿವೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ, ಈ ಅಧಿಕೃತ ಖಾತೆಗಳಿಗೆ ಪ್ರವೇಶವನ್ನು ತಡೆಹಿಡಿಯುವ ಮೂಲಕ ಭಾರತ ಟ್ವಿಟರ್ಗೆ ಮಾಹಿತಿ ಹರಿವನ್ನು ನಿರ್ಬಂಧಿಸಿರುವುದು ಕಳವಳಕಾರಿಯಾಗಿದೆ ಎಂದಿದೆ
ಏಪ್ರಿಲ್ನಲ್ಲಿ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನದ ಆರು ಸೇರಿದಂತೆ ಹದಿನಾರು ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್ಗಳನ್ನು ನಿರ್ಬಂಧಿಸಿತ್ತು.
ರಾಷ್ಟ್ರೀಯ ಭದ್ರತೆ, ಭಾರತದ ವಿದೇಶಿ ಸಂಬಂಧಗಳು, ದೇಶದಲ್ಲಿ ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿಗಳನ್ನು ಹರಡಲು ಈ ಚಾನಲ್ಗಳನ್ನು ಬಳಸಲಾಗಿತ್ತು.
Deeply concerning that #India has blocked flow of information to Indian @Twitter by withholding access to following official accounts👇🏽
📍@PakinIran
📍@PakinTurkey
📍@PakinEgypt
📍@PakistanUN_NY.These are in addition to many others for which access has been blocked.
— Spokesperson 🇵🇰 MoFA (@ForeignOfficePk) June 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.