ಬೆಂಗಳೂರು: ಬಜೆಟ್ನಲ್ಲಿ ಘೋಷಿಸಿದಂತೆ 30 ಸಾವಿರ ಮಂದಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಕಾಶಿ ಯಾತ್ರೆ ಕೈಗೊಳ್ಳುವ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯ ಸರ್ಕಾರದಿಂದ ರೂ. 5,000 ಸಹಾಯಧನ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ಏಪ್ರಿಲ್ 1 ರಿಂದ ಜೂನ್ 30 ರ ನಡುವೆ ಈಗಾಗಲೇ ಕಾಶಿ ಯಾತ್ರೆ ಮಾಡಿದವರು ಸೂಕ್ತ ದಾಖಲೆ ಸಲ್ಲಿಸಿ ಸಹಾಯಧನ ಪಡೆಯಬಹುದು.
ಕಾಶಿಯಾತ್ರೆಗೆ ರಾಜ್ಯದ ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬಜೆಟ್ ನಲ್ಲಿ ಘೋಷಿಸಲಾಗಿದ್ದ ಕಾಶಿಯಾತ್ರೆ ಯೋಜನೆಗೆ ಮಾರ್ಗಸೂಚಿ ಅಂತಿಮಗೊಳಿಸಲಾಗಿದೆ. ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ 30000 ಯಾತ್ರಾರ್ಥಿಗಳಿಗೆ ತಲಾ ಐದು ಸಾವಿರ ರೂಪಾಯಿ ನೀಡುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಧನಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಇದಕ್ಕೆ ಪೂರಕವಾದ ಒಂದು ದಾಖಲೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.
ಕಾಶಿಯಾತ್ರೆ ಯೋಜನೆ ಜೊತೆಗೆ ಭಾರತ್ ಗೌರವ್ ಯೋಜನೆಯಡಿ ಕಾಶಿಯಾತ್ರೆಗೆ ವಿಶೇಷ ರೈಲು ವ್ಯವಸ್ಥೆ ಮಾಡಲು ಸಹ ಪ್ರಯತ್ನ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ ಮುಜರಾಯಿ ಇಲಾಖೆಯು ಕೇಂದ್ರ ರೈಲ್ವೆ ಇಲಾಖೆಯ ಜೊತೆ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.