ಶಿವಮೊಗ್ಗ: ಸಿದ್ಲಿಪುರದಲ್ಲಿ ಕಾರ್ಮಿಕರ ತಾತ್ಕಾಲಿಕ ವಸತಿ ಸಮುಚ್ಚಯ ಕಾಮಗಾರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಸಂಸದ ಬಿವೈ ರಾಘವೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಕಟ್ಟಡ ಕಾರ್ಮಿಕರು ಸಾಮಾನ್ಯವಾಗಿ ವಲಸೆ ಕಾರ್ಮಿಕರಾಗಿರುತ್ತಾರೆ. ಎಲ್ಲಾ ಕಟ್ಟಡ ಕಟ್ಟುವ ಕಾರ್ಮಿಕರಿಗೆ ವಸತಿ ಇರಲಿಲ್ಲ. ಆದರೆ, ಇವತ್ತು ನಮ್ಮ ಸರ್ಕಾರ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಗೃಹಗಳನ್ನು ನಿರ್ಮಿಸುತ್ತಿದೆ. 10 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ವಸತಿಗೃಹವನ್ನು ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಿಸುವ ಕಾರ್ಮಿಕರಿಗೆ ವಸತಿ ಗೃಹವನ್ನು ನಿರ್ಮಿಸುವ ಪುಣ್ಯದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಕಾರ್ಮಿಕರಿಗೆ ಬಳಕೆಗೆ ಅನುವು ಮಾಡಿಕೊಡಲಾಗುತ್ತದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.