ನವದೆಹಲಿ: ರಿಲಾಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗವಾದ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ನ ಮುಖ್ಯಸ್ಥ ಸ್ಥಾನಕ್ಕೆ ಮುಖೇಶ್ ಅಂಬಾನಿ ಅವರು ಜೂನ್ 27 ರಿಂದ ಅನ್ವಯವಾಗುವಂತೆ ರಾಜೀನಾಮೆ ನೀಡಿದ್ದಾರೆ. ಅವರ ಪುತ್ರ ಆಕಾಶ್ ಅಂಬಾನಿ ಅವರು ಈ ಸ್ಥಾನಕ್ಕೆ ನೇಮಕವಾಗಿದ್ದಾರೆ.
ರಿಲಾಯನ್ಸ್ ಜಿಯೋ ಕಂಪನಿಯ ಮಂಡಳಿಯು ಜೂನ್ 27 ರಂದು ನಡೆದ ಸಭೆಯಲ್ಲಿ, ಕಾರ್ಯನಿರ್ವಾಹಕೇತರ ನಿರ್ದೇಶಕರಾದ ಆಕಾಶ್ ಎಂ ಅಂಬಾನಿ ಅವರನ್ನು ಕಂಪನಿಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲು ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪಂಕಜ್ ಮೋಹನ್ ಪವಾರ್ ಅವರು ಜೂನ್ 27 ರಿಂದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಮೀಂದರ್ ಸಿಂಗ್ ಗುಜ್ರಾಲ್ ಮತ್ತು ಕೆವಿ ಚೌಧರಿ ಅವರನ್ನು ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
2021 ರಲ್ಲಿ, ನಾಯಕತ್ವ ಬದಲಾವಣೆಯ ಭಾಗವಾಗಿ ತಮ್ಮ ಮಕ್ಕಳು ಹೆಚ್ಚಿನ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಬಾನಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.