
ನವದೆಹಲಿ: ಜುಲೈ 1ರಿಂದ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗುತ್ತದೆ ಎಂದು ಕೇಂದ್ರ ಮಂಗಳವಾರ ಪ್ರಕಟಿಸಿದೆ.
ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ನಿಷೇಧಿತ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಅಕ್ರಮ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಪರಿಶೀಲಿಸಲು ವಿಶೇಷ ಜಾರಿ ತಂಡಗಳನ್ನು ಸಹ ರಚಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಯಾವುದೇ ನಿಷೇಧಿತ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಅಂತರ ರಾಜ್ಯ ಚಲನೆಯನ್ನು ತಡೆಯಲು ಗಡಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮನವಿ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


