ನವದೆಹಲಿ: ಹಿರಿಯ ಸಚಿವ ಏಕನಾಥ್ ಶಿಂಧೆ ಶಿವಸೇನೆಯಲ್ಲಿ ಬಂಡಾಯವೆದ್ದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ)ಗೆ ವಿಶ್ವಾಸಮತ ಸಾಬೀತು ಪಡಿಸಲು ಸೂಚನೆ ನೀಡಿದ್ದಾರೆ.
ಜೂನ್ 30 ರಂದು ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಕರೆ ನೀಡಲಾಗಿದೆ.
ಕೊಶ್ಯಾರಿ ಅವರು ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಅವರಿಗೆ ಪತ್ರ ಬರೆದಿದ್ದು, “ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಜೂನ್ 30 ರಂದು ಬೆಳಿಗ್ಗೆ 11 ಕ್ಕೆ ಕರೆಯಬೇಕು. ಮುಖ್ಯಮಂತ್ರಿ ವಿರುದ್ಧದ ವಿಶ್ವಾಸ ಮತದ ಏಕೈಕ ಕಾರ್ಯಸೂಚಿಯನ್ನು ಈ ವಿಶೇಷ ಅಧಿವೇಶನ ಹೊಂದಲಿದೆ. ಸಂಜೆ 5 ಗಂಟೆಯೊಳಗೆ ಪ್ರಕ್ರಿಯೆಗಳು ಮುಕ್ತಾಯಗೊಳ್ಳುತ್ತವೆ” ಎಂದಿದ್ದಾರೆ.
“ಸದನದ ಕಲಾಪಗಳನ್ನು ನೇರ ಪ್ರಸಾರ ಮಾಡಬೇಕು ಮತ್ತು ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು” ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಸೆಂಬ್ಲಿಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಬಿಜೆಪಿಯು ಕೊಶ್ಯಾರಿ ಅವರನ್ನು ಒತ್ತಾಯಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಈ ನಡುವೆ, ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಬಂಡಾಯ ಶಿವಸೇನೆ ನಾಯಕ ಮತ್ತು ಸಂಪುಟ ಸಚಿವ ಏಕನಾಥ್ ಶಿಂಧೆ ಬುಧವಾರ ಗುವಾಹಟಿಯ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು.
“ಮಹಾರಾಷ್ಟ್ರದ ಸಂತೋಷ ಮತ್ತು ಸಮೃದ್ಧಿಗಾಗಿ ನಾನು ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ನಾನು ಮಾತೆ ಕಾಮಾಖ್ಯಳ ಆಶೀರ್ವಾದವನ್ನು ಕೋರುತ್ತೇನೆ” ಎಂದು ಶಿಂಧೆ ದೇವಾಲಯದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.
ಅವರ ಮುಂದಿನ ಹೆಜ್ಜೆಯ ಬಗ್ಗೆ ಕೇಳಿದಾಗ, ನಾವು ಅಗತ್ಯ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ನಾಳೆ ಮುಂಬೈಗೆ ಹಿಂತಿರುಗುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.