ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನಿನ್ನೆ ಸಂಜೆ ನವದೆಹಲಿಯಲ್ಲಿ ಹೆದ್ದಾರಿ ನಿರ್ಮಾಣ ಮತ್ತು ರಸ್ತೆ ಆಸ್ತಿಗಳ ನಿರ್ವಹಣೆಯಲ್ಲಿ ತೊಡಗಿರುವ ಪಾಲುದಾರರು ಮತ್ತು ಕಂಪನಿಗಳಿಗೆ ನ್ಯಾಷನಲ್ ಹೈವೇ ಎಕ್ಸಲೆನ್ಸ್ ಅವಾರ್ಡ್-2021 ಅನ್ನು ಪ್ರದಾನಿಸಿದರು.
ಹೆದ್ದಾರಿ ನಿರ್ಮಾಣ ಮತ್ತು ನಿರ್ವಹಣಾ ಪ್ರಕ್ರಿಯೆಯಲ್ಲಿ ತೊಡಗಿರುವ ಪಾಲುದಾರರನ್ನು ಉತ್ತೇಜಿಸುವ ಮತ್ತು ಅವರ ನಡುವೆ ಆರೋಗ್ಯಕರ ಸ್ಪರ್ಧಾತ್ಮಕತೆಯ ಮನೋಭಾವವನ್ನು ಸೃಷ್ಟಿಸುವ ಉದ್ದೇಶದಿಂದ 2018 ರಲ್ಲಿ ಈ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, ರಸ್ತೆ ಮತ್ತು ಹೆದ್ದಾರಿ ನಿರ್ಮಾಣದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕ್ರಮಗಳು ಮತ್ತು ಅಸಾಮಾನ್ಯ ಕೆಲಸಗಳಿಂದಾಗಿ ಸರ್ಕಾರದ ಮೇಲೆ ಜನರ ನಂಬಿಕೆ ಹೆಚ್ಚಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಸ್ತೆ ಸಂಪರ್ಕ ಮತ್ತು ರಸ್ತೆ ಮೂಲಸೌಕರ್ಯಗಳ ವಿಷಯದಲ್ಲಿ ಭಾರತ ಹೊಸ ಎತ್ತರವನ್ನು ಮುಟ್ಟಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಗಡ್ಕರಿ ಮಾತನಾಡಿ, ರಸ್ತೆ ಮೂಲಸೌಕರ್ಯಗಳ ಜೊತೆಗೆ ರಸ್ತೆ ಸುರಕ್ಷತೆ ಮತ್ತು ರಸ್ತೆ ಬದಿಗಳಲ್ಲಿ ಹಸಿರನ್ನು ಹೆಚ್ಚಿಸುವ ಬಗ್ಗೆ ಯೋಚಿಸುವ ಅಗತ್ಯವಿದೆ ಎಂದು ಹೇಳಿದರು.
ಎನ್ಎಚ್ಎಐ ಮತ್ತು ಅವರ ಸಚಿವಾಲಯವು ಕಾರ್ಯನಿರ್ವಹಿಸುತ್ತಿರುವ ವೇಗದಿಂದ 2024 ರ ವೇಳೆಗೆ ಭಾರತೀಯ ರಸ್ತೆಗಳು ಅಮೇರಿಕನ್ ಗುಣಮಟ್ಟ ಹೊಂದಲಿವೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಸುಮಾರು 122 ನಾಮನಿರ್ದೇಶನಗಳನ್ನು ಸ್ವೀಕರಿಸಲಾಗಿದ್ದು ಅದರಲ್ಲಿ 30 ಅಂತಿಮ ನಾಮನಿರ್ದೇಶನಗಳನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಯೋಜನಾ ನಿರ್ವಹಣೆಯಲ್ಲಿನ ಶ್ರೇಷ್ಠತೆ, ಹೆದ್ದಾರಿ ಸುರಕ್ಷತೆಯಲ್ಲಿನ ಶ್ರೇಷ್ಠತೆ, ಟೋಲ್ ನಿರ್ವಹಣೆಯಲ್ಲಿನ ಶ್ರೇಷ್ಠತೆ, ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿನ ಶ್ರೇಷ್ಠತೆ, ನಾವೀನ್ಯತೆ, ಹಸಿರು ಹೆದ್ದಾರಿಗಳು, ಸವಾಲಿನ ಸ್ಥಿತಿಯಲ್ಲಿ ಅತ್ಯುತ್ತಮ ಕೆಲಸ, ಸೇತುವೆ ನಿರ್ಮಾಣ ಮತ್ತು ಟನ್ನೆಲ್ ಸೇರಿದಂತೆ ಒಂಬತ್ತು ವಿಭಾಗಗಳಲ್ಲಿ ಪ್ರಶಸ್ತಿಗಳನ್ನ ನೀಡಲಾಯಿತು.
ಈ ಪ್ರಶಸ್ತಿಗಳ ಜೊತೆಗೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕ್ಷೇತ್ರ ಅಧಿಕಾರಿಗಳಿಗೆ ವಿಶೇಷ ಪ್ರಶಸ್ತಿಗಳನ್ನು ಸಹ ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.