ನವದೆಹಲಿ: ತೀಸ್ತಾ ಸೆಟಲ್ವಾಡ್ ಮತ್ತು ಇತರ ಇಬ್ಬರ ಬಂಧನಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ.
ಹೈಕಮಿಷನರ್ ಅವರು ನೀಡಿರುವ ಹೇಳಿಕೆಯು ಸ್ವೀಕಾರಾರ್ಹವಲ್ಲ, ಇದು ಭಾರತದ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯೊಳಗೆ ಮಧ್ಯಪ್ರವೇಶಿಸುವ ಪ್ರಯತ್ನ ಎಂದು ಭಾರತ ಹೇಳಿದೆ.
ಅಸ್ತಿತ್ವದಲ್ಲಿರುವ ನ್ಯಾಯಾಂಗ ಪ್ರಕ್ರಿಯೆಗಳಿಗೆ ಅನುಗುಣವಾಗಿಯೇ ಭಾರತದ ಆಡಳಿತವು ಕಾನೂನಿನ ಉಲ್ಲಂಘನೆಯನ್ನು ಆಧರಿಸಿ ಇವರುಗಳ ಬಂಧನ ಮಾಡಿದೆ. ಕಾನೂನು ಕ್ರಮವನ್ನು ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಎಂದು ತಪ್ಪಾಗಿ ಬಿಂಬಿಸುವುದು ಸ್ವೀಕಾರಾರ್ಹವಲ್ಲ ಎಂದಿದೆ.
ಗೋಧ್ರಾ ಗಲಭೆ ಪ್ರಕರಣದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ.
#BREAKING: India hits out at UN Office of the High Commissioner for Human Rights regarding this statement on legal action against Teesta Setalvad and two other persons. “Remarks completely unwarranted and constitute an interference in India's independent judicial system.” pic.twitter.com/v8pMGyPEmW
— Aditya Raj Kaul (@AdityaRajKaul) June 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.