ನವದೆಹಲಿ: ಹಣಕಾಸು ಸೇರ್ಪಡೆಯನ್ನು ಉತ್ತೇಜಿಸುವ ಉದ್ದೇಶದಿಂದ 63,000 ಕ್ರಿಯಾಶೀಲ ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳ (PACS) ಕಂಪ್ಯೂಟರೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 2,516 ಕೋಟಿ ರೂ.ಗಳಿಗೆ ಸರ್ಕಾರ ಇಂದು ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಈ ನಿರ್ಧಾರ ಕೈಗೊಂಡಿದೆ.
ಕಂಪ್ಯೂಟರೀಕರಣ ಕಾರ್ಯಕ್ರಮವು ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳ ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ಅದರ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುತ್ತದೆ ಮತ್ತು ಇವುಗಳು ತಮ್ಮ ವ್ಯವಹಾರಗಳನ್ನು ವೈವಿಧ್ಯಗೊಳಿಸಲು ಮತ್ತು ಬಹು ಚಟುವಟಿಕೆಗಳು/ಸೇವೆಗಳನ್ನು ಕೈಗೊಳ್ಳಲು ಅನುಕೂಲ ಮಾಡಿಕೊಡುತ್ತದೆ.
ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಈ ಯೋಜನೆಯು ಸುಮಾರು 63,000 ಕ್ರಿಯಾತ್ಮಕ ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳನ್ನು 5 ವರ್ಷಗಳಲ್ಲಿ ಕಂಪ್ಯೂಟರೀಕೃತಗೊಳಿಸಲಿದೆ. ಇದಕ್ಕಾಗಿ ಒಟ್ಟು 2,516 ಕೋಟಿ ರೂ ಅನುಮೋದಿಸಲಾಗಿದೆ ಎಂದಿದ್ದಾರೆ.
ಇದರಿಂದ 13 ಕೋಟಿ ರೈತರಿಗೆ ಅನುಕೂಲವಾಗಲಿದೆ. ಬಹುತೇಕ ಸಣ್ಣ ಮತ್ತು ಅತಿ ಸಣ್ಣ ರೈತರು ಪ್ರಯೋಜನ ಪಡೆಯಲಿದ್ದಾರೆ ಎಂದಿದ್ದಾರೆ.
ಯೋಜನೆಯು ಸೈಬರ್ ಭದ್ರತೆ ಮತ್ತು ಡೇಟಾ ಸಂಗ್ರಹಣೆಯೊಂದಿಗೆ ಕ್ಲೌಡ್-ಆಧಾರಿತ ಸಾಮಾನ್ಯ ಸಾಫ್ಟ್ವೇರ್ನ ಅಭಿವೃದ್ಧಿಯನ್ನು ಒಳಗೊಂಡಿದೆ. ಇದು PACS ಗೆ ಹಾರ್ಡ್ವೇರ್ ಬೆಂಬಲವನ್ನು ಒದಗಿಸುತ್ತದೆ ಮತ್ತು ಅಸ್ತಿತ್ವದಲ್ಲಿರುವ ದಾಖಲೆಗಳ ಡಿಜಿಟಲೀಕರಣದಲ್ಲಿ ಸಹಾಯ ಮಾಡುತ್ತದೆ. ಈ ಸಾಫ್ಟ್ವೇರ್ ರಾಜ್ಯಗಳ ಅಗತ್ಯತೆಗಳಿಗೆ ಅನುಗುಣವಾಗಿ ಸ್ಥಳೀಯ ಭಾಷೆಯಲ್ಲಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.