ಮುಂಬಯಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗಿದೆ. ಬಹುಮತ ಸಾಬೀತುಪಡಿಸುವ ಮುನ್ನವೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಗುರುವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಕೆಲವೇ ನಿಮಿಷಗಳಲ್ಲಿ ಠಾಕ್ರೆ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರಿಗೆ ಬುಧವಾರ ರಾತ್ರಿ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಉದ್ದವ್ ಠಾಕ್ರೆ ಅವರನ್ನು ಸಿಎಂ ಆಗಿ ಮುಂದುವರೆಯುವಂತೆ ಕೇಳಿಕೊಂಡಿದ್ದಾರೆ.
ಉದ್ಧವ್ ಠಾಕ್ರೆ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈಗ ಎಲ್ಲರ ಚಿತ್ತ ಬಿಜೆಪಿಯತ್ತ ನೆಟ್ಟಿದೆ.
ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಮುಂದಿನ ಕ್ರಮವನ್ನು ಈಗ ನಿರ್ಧರಿಸುತ್ತಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಬುಧವಾರ ರಾತ್ರಿ ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ನಂತರ ಮುಂಬೈನಲ್ಲಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಹಲವಾರು ಬಿಜೆಪಿ ಶಾಸಕರು ಮತ್ತು ಹಿರಿಯ ನಾಯಕರು ಜಮಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.